ಉಚಿತ ಅಕ್ಕಿ ನೀಡುವ ಯೋಜನೆ ಜಾರಿಗಾಗಿ ಅಕ್ಕಿ ಖರೀದಿಸಲು ಕರ್ನಾಟಕ ಸರ್ಕಾರ ಕೇಂದ್ರ ಆಹಾರ ನಿಗಮದ ಮೊರೆ ಹೋಗಿತ್ತು. ಆದರೆ, ಅಲ್ಲಿಂದ ಹೆಚ್ಚುವರಿ ಅಕ್ಕಿ ಪೂರೈಕೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ನಂತರ ಸಚಿವ ಮುನಿಯಪ್ಪ ಅವರು ಕೇಂದ್ರ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆದರೂ ಹೆಚ್ಚುವರಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ನಿರಾಕರಿಸಿತ್ತು. ಇದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವಣ ಜಟಾಪಟಿಗೂ ಕಾರಣವಾಗಿತ್ತು. ರಾಜ್ಯದ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವಣ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿತ್ತು.ಹೇಗಾದ್ರು ಮಾಡಿ ಶತಾಯ ಗತಾಯ ಜನರಿಕೆ ಕೊಟ್ಟ ಮಾತು ಉಳಿಸಿಕೊಳ್ಳುವ ನಿಟ್ಟಿನಲ್ಲಿ. ಬೇರೆ ಬೇರೆ ಸರ್ಕಾರದಿಂದ ಅಕ್ಕಿ ತರಿಸಲು ಸಿದ್ದು ಎಲ್ಲಿಲ್ಲದ ಸರ್ಕಸ್ ಮಾಡಿದ್ರು... ಆದ್ರೂ ಕೂಡ ಸಿದ್ದು ಶ್ರಮಕ್ಕೆ ಫಲಸಿಕ್ಕಿಲ್ಲ.. ಹಾಗಾಗಿ ಕೊಟ್ಟ ಮಾತಿನಂತೆ ಇದೀಗ ಗ್ಯಾರಂಟಿ ಈಡೇರಿಕೆಗೆ, ಅಕ್ಕಿ ಬದಲು ಜನರಿಗೆ ಹಣ ನೀಡಲು ಸಿದ್ದರಾಮಯ್ಯ ಸರ್ಕಾರ ತೀರ್ಮಾನಿಸಿದೆ... 5 ಕೆಜಿ ಅಕ್ಕಿ ಬದಲು ಜನರಿಗೆ ಹಣ ನೀಡಲು ನಿರ್ಧರಿಸಲಾಗಿದೆ. ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಬಿಪಿಎಲ್ ಪಡಿತರ ಕಾರ್ಡ್ದಾರರಿಗೆ ಮಾಸಿಕ ತಲಾ 170 ರೂ. ನೀಡುತ್ತೇವೆ. ಜುಲೈ ತಿಂಗಳಿಂದಲೇ ಪಡಿತರದಾರರ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ಕೊಟ್ಟಿದ್ದಾರೆ