Publish Date: Mon, 27 Mar 2023 (17:46 IST)
Updated Date: Mon, 27 Mar 2023 (16:48 IST)
ಕಾಂಗ್ರೆಸ್ನ ಒಳಜಗಳದ ಜೊತೆಗೆ ಸಿದ್ದರಾಮಯ್ಯ ಅವರಿಗೆ ಅವರ ಮೇಲೇ ನಂಬಿಕೆಯಿಲ್ಲ. ಹಾಗಾಗಿ ಬೇರೆ ಬೇರೆ ಕ್ಷೇತ್ರಗಳಿಂದ ಸ್ಪರ್ಧಿಸಲು ಪ್ರಯತ್ನಿಸುತ್ತಿದ್ಧಾರೆ. ಅಂತಾ ಮೈಸೂರಿನಲ್ಲಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯನವರ ಹೈಕಮಾಂಡ್ ಮನೆಯಲ್ಲಿದೆ. ಸಿದ್ದರಾಮಯ್ಯ ಎರಡು ಕ್ಷೇತ್ರ ಸುರಕ್ಷಿತವಲ್ಲ ಎಂದು ಮೂರು ಕ್ಷೇತ್ರದಿಂದಲೂ ಸ್ಪರ್ಧಸಬಹುದು. ನಾನೇನು ಅವರ ಬಗ್ಗೆ ಸಹಾನುಭೂತಿ ತೋರಿಲ್ಲ ಅಂತಾ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ರು