Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಹೆಬ್ಬಾಳ್ಕರ್ ವಿರುದ್ಧ ಕ್ರಮಕೈಗೊಳ್ಳದಿದ್ರೆ ವಿಧಾನಸೌಧಕ್ಕೆ ಮುತ್ತಿಗೆ

ಹೆಬ್ಬಾಳ್ಕರ್ ವಿರುದ್ಧ ಕ್ರಮಕೈಗೊಳ್ಳದಿದ್ರೆ ವಿಧಾನಸೌಧಕ್ಕೆ ಮುತ್ತಿಗೆ
ಬೆಳಗಾವಿ , ಶನಿವಾರ, 2 ಸೆಪ್ಟಂಬರ್ 2017 (13:05 IST)
ಬೆಳಗಾವಿ: ಕನ್ನಡ ವಿರೋಧಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಮಕೈಗೊಳ್ಳದಿದ್ರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಕನ್ನಡ ಪರ ಸಂಘಟನೆಗಳು ಎಚ್ಚರಿಸಿವೆ.
ನಗರದ ಚೆನ್ನಮ್ಮ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು, ಜೈ ಮಹಾರಾಷ್ಟ್ರ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಹೆಬ್ಬಾಳ್ಕರ್ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಅವರನ್ನು ಮತದಾರರ ಪಟ್ಟಿಯಿಂದ ಕೈಬಿಡಬೇಕು ಎಂದು ಸರಕಾರವನ್ನು ಒತ್ತಾಯಿಸಿದ್ದಾರೆ.
 
ಪ್ರತಿಭಟನೆಯಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡು ಹೆಬ್ಬಾಳ್ಕರ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
 
ಹೆಬ್ಬಾಳ್ಕರ್ ವಿರುದ್ಧ ಕ್ರಮಕೈಗೊಳ್ಳದಿದ್ರೆ ಸೆಪ್ಟೆಂಬರ್ 5 ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಜಿ. ಪರಮೇಶ್ವರ್‌ಗೆ ಅಸಮಾಧಾನವಿಲ್ಲ: ರಾಮಲಿಂಗಾರೆಡ್ಡಿ ಸ್ಪಷ್ಟನೆ