Webdunia - Bharat's app for daily news and videos

Install App

ಸುಖಾ ಸುಮ್ಮನೇ ಓಡಾಡಿದ್ರೆ ನಿಮ್ಮ ಕೈಗೂ ಬೀಳುತ್ತೆ ಮುದ್ರೆ

Webdunia
ಗುರುವಾರ, 26 ಮಾರ್ಚ್ 2020 (17:35 IST)
ಕೋವಿಡ್ 19 ವೈರಸ್ ಮುನ್ನೆಚ್ಚರಿಕೆಯ ಕ್ರಮವಾಗಿ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದೆ.

ಉತ್ತರಕನ್ನಡ ಜಿಲ್ಲಾಡಳಿತವು ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಅನಾವಶ್ಯಕವಾಗಿ ಯಾವುದೇ ಕಾರಣಗಳಿಲ್ಲದೇ ಓಡಾಡುವವರ ಡ್ರೈವಿಂಗ್ ಲೈಸೆನ್ಸ್ ಹಾಗೂ ವಾಹನದ ನೊಂದಣಿಯನ್ನು ರದ್ದು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಕೆ. ಎಚ್ಚರಿಕೆ ನೀಡಿದ್ದರು. ಆದರೆ ಕೆಲವು ಸಾರ್ವಜನಿಕರು ಇದಕ್ಕೂ ಬಗ್ಗದ ಹಿನ್ನೆಲೆಯಲ್ಲಿ ಇನ್ನಷ್ಟು ಬಿಗಿ ಕ್ರಮಕ್ಕೆ ಅವರು ಮುಂದಾಗಿದ್ದಾರೆ.

ಯಾವುದೇ ಕಾರಣಗಳಿಲ್ಲದೇ ಅನಗತ್ಯವಾಗಿ ರಸ್ತೆಯಲ್ಲಿ ಓಡಾಡಿ ಕಾಯ್ದೆ ಉಲ್ಲಂಘಿಸುವ ವ್ಯಕ್ತಿ ಕೈಗೆ ಮುದ್ರೆ ಹಾಕಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.  ಮುದ್ರೆ ಹಾಕಿಸಿಕೊಂಡ ವ್ಯಕ್ತಿ ಎರಡನೇ ಬಾರಿ ಮತ್ತೆ ಆದೇಶ ಉಲ್ಲಂಘಿಸಿದರೆ ಆತ ವಾಸಿಸುವ ವಸತಿ ಪ್ರದೇಶದಲ್ಲಿ ಆತನ ಹೆಸರನ್ನು ಸಾರ್ವಜನಿಕ ಪ್ರಕಟಣೆಯ ಮೂಲಕ ಘೋಷಿಸಲಾಗುತ್ತದೆ.

ಮೂರನೇ ಬಾರಿಯೂ ಆದೇಶ ಉಲ್ಲಂಘಿಸಿದರೆ ಜಿಲ್ಲಾಡಳಿತದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಉಲ್ಲಂಘನೆ ಮಾಡಿದವರು ಎಂದು ಆತನ ಫೋಟೊ ಹಾಕಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments