Webdunia - Bharat's app for daily news and videos

Install App

ವಿದೇಶದಲ್ಲಿ ಪ್ರಜ್ವಲ್‌ಗೆ ನೆರವಾದ ಸ್ನೇಹಿತೆಗೆ ಎಸ್‌ಐಟಿ ನೋಟಿಸ್

sampriya
ಶನಿವಾರ, 8 ಜೂನ್ 2024 (09:59 IST)
ಬೆಂಗಳೂರು:  34 ದಿನಗಳ ಕಾಲ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣಗೆ ಸ್ನೇಹಿತೆ ನೆರವಾಗಿರುವ ವಿಚಾರ ತನಿಖೆಯಲ್ಲಿ ತಿಳಿದುಬಂದಿದೆ.

ಹಲವು ಮಹಿಳೆಯರಿಗೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಎಸ್‌ಐಟಿಗೆ ಬೇಕಾಗಿದ್ದ ಪ್ರಜ್ವಲ್‌ ರೇವಣ್ಣ ಅವರು ವಿದೇಶಕ್ಕೆ ಪ್ರಯಾಣ  ಬೆಳೆಸಿ ತಲೆಮರೆಸಿಕೊಂಡಿದ್ದರು. ಈ ವೇಳೆ ಅವರಿಗೆ ಗರ್ಲ್‌ಫ್ರೆಂಡ್‌ ನೆರವಾಗಿರುವ ಬಗ್ಗೆ  ಎಸ್‌ಐಟಿ ತನಿಖೆ ವೇಳೆ ಹೇಳಿಕೊಂಡಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. 

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದ ಹಾಗೇ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ವಿಡಿಯೋ ವೈರಲ್‌ ಆಯಿತು. ಇದರ ಬೆನ್ನಲ್ಲೇ ಪ್ರಜ್ವಲ್‌ ಅವರು ಜರ್ಮನಿಗೆ ಪ್ರಯಾಣ ಬೆಳೆಸಿ ತಲೆಮರೆಸಿಕೊಂಡಿದ್ದರು. ಪ್ರಜ್ವಲ್‌ ರೇವಣ್ಣ ಹಾಗೂ ಅವರ ತಂದೆ ಎಚ್‌ ರೇವಣ್ಣ ವಿರುದ್ಧ ಸಂತ್ರಸ್ತೆಯರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಲಾಯಿತು.

ಇನ್ನೂ ಪ್ರಕರಣದ ಬಿಸಿ ಜೋರಾಗುತ್ತಿದ್ದ ಹಾಗೇ ರಾಜ್ಯ ಸರ್ಕಾರ  ಈ ಪ್ರಕರಣವನ್ನು ಎಸ್‌ಐಟಿ ವಹಿಸಿತು. ತನಿಖೆಗೆ ಹಾಜರಾಗುವಂತೆ ಪ್ರಜ್ವಲ್‌ ರೇವಣ್ಣಗೆ ಎರಡು ಬಾರಿ ಎಸ್‌ಐಟಿ ನೋಟಿಸ್‌ ನೀಡಿದರು ಅದಕ್ಕೆ ಕ್ಯಾರೇ ಎನ್ನಲಿಲ್ಲ. ಆದರೆ 34 ದಿನಗಳ ಬಳಿಕ ಬೆಂಗಳೂರಿಗೆ ಆಗಮಿಸಿದ ಪ್ರಜ್ವಲ್‌ ರೇವಣ್ಣ ಅವರನ್ನು ಎಸ್‌ಐಟಿ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. 

ತನಿಖೆಯಲ್ಲಿ ಪ್ರಜ್ವಲ್‌ ರೇವಣ್ಣಗೆ ಗರ್ಲ್‌ಫ್ರೆಂಡ್‌ ಸಹಾಯ ಕೋರಿರುವುದಾಗಿ ತಿಳಿದುಬಂದಿದೆ. ಅದಲ್ಲದೆ ಎಸ್‍ಐಟಿ ಅಧಿಕಾರಿಗಳು ಆರೋಪಿ ಪ್ರಜ್ವಲ್ ಸ್ನೇಹಿತೆಗೆ ನೋಟಿಸ್ ಕೊಟ್ಟಿದ್ದಾರೆ. ಪ್ರಜ್ವಲ್‍ಗೆ ವಿದೇಶದಲ್ಲಿರುವಾಗ ಸಹಾಯ ಮಾಡಿರೋ ಬಗ್ಗೆ ದಾಖಲೆಗಳಿದ್ದು, ಪ್ರಕರಣ ಸಂಬಂಧ ಮಾಹಿತಿ ನೀಡುವಂತೆ ಕೋರಿ ಎಸ್‍ಐಟಿ ಅಧಿಕಾರಿಗಳು ಪ್ರಜ್ವಲ್ ಗರ್ಲ್‍ಫ್ರೆಂಡ್‍ಗೆ ನೋಟಿಸ್ ಕೊಟ್ಟಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಮುಂದಿನ ಸುದ್ದಿ
Show comments