ಬಳ್ಳಾರಿ ನಗರ ಶಾಸಕ ಅನಿಲ್ ಲಾಡ್ ಅವರು ಹುಟ್ಟು ಹಬ್ಬವನ್ನು ಆಚರಿಸಿಕೊಂಡ ಸಂಭ್ರಮದಲ್ಲಿದ್ದಾಗಲೇ ಅಕ್ರಮ ಅದಿರು ಸಾಗಾಣೆ ಪ್ರಕರಣದ ಸಂಬಂಧ ಎಸ್ಐಟಿ ಎಫ್ಐಆರ್ ದಾಖಲಿಸಿ ಶಾಕ್ ನೀಡಿದೆ.
2010 ರಿಂದ 2012ರ ವರೆಗೆ 2 ವರ್ಷಗಳ ಕಾಲ ಪರವಾನಿಗೆ ಪಡೆಯದೇ 82 ಸಾವಿರ ಟನ್ ಅದಿರು ಸಾಗಿಸಿಸಾಲಗಿದೆ ಎಂದು ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.
ಅನಿಲ್ ಲಾಡ್ ಕೆನರಾ ಮಿನರಲ್ಸ್ ಲಿಮಿಟಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವೇಳೆ 82,275 ಮೆಟ್ರಿಕ್ ಟನ್ ಅದಿರನ್ನು ಅಕ್ರಮವಾಗಿ ಸಾಗಿಸಿ ಸರ್ಕಾರದ ಬೊಕ್ಕಸಕ್ಕೆ 12.30 ಕೋಟಿ ನಷ್ಟವುಂಟು ಮಾಡಿರುವ ಬಗ್ಗೆ ಎಸ್‌ಐಟಿ ತನಿಖೆ ನಡೆಸಿದೆ.
ಅಕ್ರಮ ಗಣಿಗಾರಿಕೆ ವಿರುದ್ಧ ಪಾದಯಾತ್ರೆ ಮಾಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದ ಶಾಸಕರ ವಿರುದ್ದ ಅಕ್ರಮವಾಗಿ ಅದಿರು ಸಾಗಿಸಿರುವ ಸಂಬಂಧ ಎಫ್ಐಆರ್ ದಾಖಲಿಸಿರುವುದು ಪಕ್ಷಕ್ಕೆ ಮುಜುಗರ ತಂದಿಟ್ಟಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಪಡೆಯಲು ಇದು ಸಮಸ್ಯೆಯಾಗುವ ಸಾಧ್ಯತೆಯಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.