Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ಉಪಸಭಾಪತಿ ಎಸ್ ಎಲ್ ಧರ್ಮೇಗೌಡ ನಿನ್ನೆ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ಬಳಿ ರೈಲ್ವೇ ಹಳಿ ಮೇಲೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ರಾತ್ರಿ ಡ್ರೈವರ್ ಜೊತೆ ಸ್ಯಾಂಟ್ರೋ ಕಾರಿನಲ್ಲಿ ತೆರಳಿದ್ದ ಧರ್ಮೇಗೌಡರು ರೈಲ್ವೇ ಟ್ರ್ಯಾಕ್ ಬಳಿ ಬಂದಾಗ ಚಾಲಕನಿಗೆ ನನಗೆ ವೈಯಕ್ತಿಕ ಕರೆ ಮಾಡುವುದಿದೆ ಎಂದು ಆತನನ್ನು ಸಾಗ ಹಾಕಿದ್ದರು. ಬಳಿಕ ರೈಲ್ವೇ ಟ್ರ್ಯಾಕ್ ಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಡರಾತ್ರಿಯಾದರೂ ಧರ್ಮೇಗೌಡರು ಮರಳಿ ಬಾರದೇ ಹೋದಾಗ ಅವರ ಚಾಲಕ, ಗನ್ ಮ್ಯಾನ್ ಹುಡುಕಾಟ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಕ್ಕರಾಯಪಟ್ಟಣದ ರೈಲ್ವೇ ಹಳಿಯಲ್ಲಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಅಲ್ಲೇ ಡೆತ್ ನೋಟ್ ಕೂಡಾ ಸಿಕ್ಕಿದೆ. ಆದರೆ ಇದರಲ್ಲಿ ಏನು ಬರೆದಿದ್ದಾರೆಂದು ತಿಳಿದುಬಂದಿಲ್ಲ. ಇತ್ತೀಚೆಗೆ ವಿಧಾನಪರಿಷತ್ ನಲ್ಲಿ ಅವಿಶ್ವಾಸ ಮಂಡನೆ ಸಂದರ್ಭ ನಡೆದ ಎಳೆದಾಟ-ನೂಕಾಟದ ಘಟನೆಯಿಂದ ಮನನೊಂದಿದ್ದರು ಎನ್ನಲಾಗಿದೆ.