Publish Date: Mon, 12 Apr 2021 (08:32 IST)
Updated Date: Mon, 12 Apr 2021 (08:36 IST)
ನವದೆಹಲಿ : ಸಾಫ್ಟ್ ವೇರ್ ಇಂಜಿನಿಯರ್ ಒಬ್ಬ ಬಾಡಿಗೆದಾರರ ಮಗುವನ್ನು ಅಪಹರಿಸಿ ಹಣಕ್ಕಾಗಿ ಬೇಡಿಕೆ ಇಟ್ಟ ಘಟನೆ ನವದೆಹಲಿಯಲ್ಲಿ ನಡೆದಿದೆ.
ಗೆಳತಿಯ ಬೇಡಿಕೆಗಳನ್ನು ಈಡೇರಿಸಲು ಹಣಕ್ಕಾಗಿ ಸಾಫ್ಟ್ ವೇರ್ ಇಂಜಿನಿಯರ್ ಬಾಡಿಗೆದಾರನ ಮನೆಗೆ ಬಂದು ಮಗುವನ್ನು ಅಪಹರಿಸಿ 40ಲಕ್ಷ ರೂಗೆ ಬೇಡಿಕೆ ಇಟ್ಟಿದ್ದಾನೆ.
ಈ ಬಗ್ಗೆ ಮಗುವಿನ ಪೋಷಕರು ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಆರೋಪಿಯ ಬೆನ್ನಟ್ಟಿದ ಪೊಲೀಸರು ಆತನನ್ನು ಹಿಡಿದು ಮಗುವನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ.