ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಮಾಲೀಕರಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಎಚ್.ವಿಶ್ವನಾಥ್ ಗುಡುಗಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಜನರೇ ಮಾಲೀಕರು ಅದು ವೈಯಕ್ತಿಕ ಸ್ವತ್ತಲ್ಲ. ಕಾಂಗ್ರೆಸ್ ಪಕ್ಷ ನನಗೆ ತಾಯಿಯಿದ್ದಂತೆ, ಪಕ್ಷವನ್ನು ನಾನು ಯಾವತ್ತೂ ದ್ವೇಷಿಸುವುದಿಲ್ಲ. ನಾನು ಪಕ್ಷ ಬಿಡುತ್ತೇನೆ ಎಂದಾಗ ಯಾರೂ ಏಕ ಪಕ್ಷ ತೊರೆಯುತ್ತಿದ್ದೀರಿ ಎಂದು ಕೇಳಲಿಲ್ಲ ಎಂದು ಆಕ್ರೋಷ ವ್ಯಕ್ತಪಡಿಸಿದರು.
ಎಐಸಿಸಿ ವೀಕ್ಷಕರು, ರಾಜ್ಯ ಉಸ್ತುವಾರಿ ಹೊತ್ತಿರುವ ಕೆ.ಸಿ.ವೇಣುಗೋಪಾಲ್ ಕೂಡಾ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾದರು. ನನ್ನ ಸಲಹೆಗಳಿಗೆ ಪಕ್ಷದಲ್ಲಿ ಯಾವುದೇ ಗೌರವವಿರಲಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯಬೇಕಾ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ತುರ್ತುಪರಿಸ್ಥಿತಿಯಂತಹ ವಾತಾವರಣವಿದೆ.ಅಧಿಕಾರದಲ್ಲಿರುವವರು ಕಾಂಗ್ರೆಸ್ ಪಕ್ಷವನ್ನು ವಿನಾಶದ ಅಂಚಿಗೆ ತಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಉಪಚುನಾವಣೆಯಲ್ಲಿ ನನ್ನ ಹೆಸರನ್ನು ತೆಗೆದುಹಾಕಿ ಸಿಎಂ ಸಿದ್ದರಾಮಯ್ಯ ಪುತ್ರನ ಹೆಸರು ಹಾಕಿದರು. ನನ್ನನ್ನು ಬಿಟ್ಟು ಎಐಸಿಸಿ ಸಭೆ ನಡೆಸಿದರು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.