Webdunia - Bharat's app for daily news and videos

Install App

ಭಾರತ್ ಜೋಡೋ ಯಾತ್ರೆಗೆ ನಾಳೆ ಸೋನಿಯಾ ಎಂಟ್ರಿ

Webdunia
ಭಾನುವಾರ, 2 ಅಕ್ಟೋಬರ್ 2022 (14:29 IST)
ಕಾಂಗ್ರೆಸ್​ಗೆ ನವ ಚೈತನ್ಯ ನೀಡುವ ಉದ್ದೇಶದಿಂದ ರಾಹುಲ್​ ಗಾಂಧಿ ಕೈಗೊಂಡಿರುವ ಭಾರತ್​ ಜೋಡೋ ಯಾತ್ರೆಗೆ ಕರ್ನಾಟಕದಲ್ಲಿ ಅಭೂತಪೂರ್ವ ಸ್ಪಂದನೆ ಸಿಗುತ್ತಿದ್ದು, ಮಗನಿಗೆ ಸಾಥ್ ನೀಡಲು ಕಾಂಗ್ರೆಸ್​ನ ರಾಷ್ಟ್ರ ನಾಯಕಿ ಸೋನಿಯಾ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ಸಂಜೆಯೇ ಕರ್ನಾಟಕಕ್ಕೆ ಸೋನಿಯಾ ಗಾಂಧಿ ಆಗಮಿಸಲಿದ್ದು, ನಾಳೆ ಮೈಸೂರಿನಿಂದ ಆರಂಭವಾಗುವ ಪಾದಯಾತ್ರೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿವೆ. ಹಳೇ ಮೈಸೂರು ಭಾಗಕ್ಕೆ ಕಾಂಗ್ರೆಸ್​ ಹೆಚ್ಚು ಒತ್ತು ಕೊಡುತ್ತಿದ್ದು, ಅ.6ರಂದು ಪ್ರಿಯಾಂಕಾ ಗಾಂಧಿ ಕೂಡ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಪ್ರಿಯಾಂಕ ಗಾಂಧಿ ಪಾದಯಾತ್ರೆ ನಡೆಸಲಿದ್ದಾರೆ.
 
ವಿಶೇಷ ವಿಮಾನದ ಮೂಲಕ ಮೈಸೂರಿಗೆ ಸೋನಿಯಾ ಗಾಂಧಿ ಆಗಮಿಸಲಿದ್ದಾರೆ. ನಾಳೆ(ಸೋಮವಾರ)ಪಾದಯಾತ್ರೆ ಮುಗಿದ ಬಳಿಕ ಸೋನಿಯಾ ಕುಟುಂಬ ಕೊಡಗಿಗೆ ತೆರಳಲಿದೆ. ಭಾರತ್ ಜೋಡೋ ಪಾದಯಾತ್ರೆಗೆ ಅ.4 ಮತ್ತು‌ 5 ರಂದು ಬಿಡುವು ಇರುವ ಕಾರಣ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಕೊಡಗಿನ ಖಾಸಗಿ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನಾಳೆ ಮೈಸೂರಿಗೆ ಸೋನಿಯಾ ಗಾಂಧಿ ಆಗಮಿಸುವ ಬಗ್ಗೆ ಇನ್ನೂ ಖಚಿತವಾಗಿಲ್ಲ, ಇಂದು ಸಂಜೆ ಸೋನಿಯಾ ಗಾಂಧಿ ಆಗಮನ ಖಚಿತವಾಗುತ್ತದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments