ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ಗೈರು ಹಾಜರಾಗಿರುವ ಸಚಿವರಿಗೆ ಸ್ಪೀಕರ್ ಕೆ.ಬಿ.ಕೋಳಿವಾಡ್ ಚಾಟಿ ಬೀಸಿದ್ದಾರೆ.
ಕಾಲಕಾಲಕ್ಕೆ ಮಳೆಯಾಗದಿರುವ ಹಿನ್ನೆಲೆಯಲ್ಲಿ ರಾಜ್ಯ ತೀವ್ರ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದೆ. ಹೀಗಾಗಿ ಅಧಿವೇಶನದಲ್ಲಿ ಬರಗಾಲದ ಕುರಿತು ಚರ್ಚೆ ನಡೆಯುತ್ತಿದೆ. ನಿಮ್ಮ ಸಚಿವರು ಎಲ್ಲಿ ರಾಜ್ಯ ಸರಕಾರವನ್ನು ಪ್ರಶ್ನಿಸಿದ್ದಾರೆ.
ಚಳಿಗಾಲದ ಅಧಿವೇಶನಕ್ಕೆ ತೋಟಗಾರಿಕಾ ಸಚಿವ, ಕೃಷಿ ಸಚಿವ ಹಾಗೂ ಗ್ರಾಮೀಣಾಭಿವೃದ್ಧಿ ಖಾತೆ ಸಚಿವರು ಗೈರು ಹಾಜರಾಗಿದ್ದಕ್ಕೆ ಗರಂ ಆದ ಸ್ಪೀಕರ್ ಕೆ.ಬಿ.ಕೋಳಿವಾಡ್, ಬರಗಾಲದ ಕುರಿತು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಈ ಮೂವರು ಸಚಿವರು ಹಾಜರಾಗಲೇಬೇಕು ಎಂದು ಕಿಡಿಕಾರಿದ್ದಾರೆ.
ರಾಜ್ಯಕ್ಕೆ ಭೀಕರ ಬರಗಾಲ ಪರಿಸ್ಥಿತಿ ಎದುರಾಗಿದ್ದು, ರಾಜ್ಯದ ಜನತೆ ಸಂಕಷ್ಟದಲ್ಲಿದ್ದಾರೆ. ಆದರೂ ಸಹ ಸಾಕಷ್ಟು ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ಬಹುತೇಕ ಶಾಸಕರ ಹಾಗೂ ಸಚಿವರು ಗೈರು ಹಾಜರಾಗಿರುವುದು ವಿಪರ್ಯಾಸದ ಸಂಗತಿಯಾಗಿದೆ. ಇವರಿಗೆ ರಾಜ್ಯದ ಜನತೆಯ ಕುರಿತು ಕಾಳಜಿಯೇ ಇಲ್ಲದಂತಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ