Publish Date: Mon, 18 May 2020 (19:30 IST)
Updated Date: Mon, 18 May 2020 (19:32 IST)
ಸರಕಾರದಿಂದ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದ್ದು, ಹೆಸರು ನೋಂದಣಿ ಮಾಡುವಂತೆ ಸೂಚಿಸಲಾಗಿದೆ.
ಕೊರೋನಾ ವೈರಸ್ ಲಾಕ್‍ಡೌನ್ ಸಂದರ್ಭದಲ್ಲಿ ಕಲಬುರಗಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿರುವ ಉತ್ತರ ಪ್ರದೇಶ ರಾಜ್ಯದ ವಲಸೆ ಕಾರ್ಮಿಕರಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಕಲಬುರಗಿಯಿಂದ ಲಖನೌ ಉತ್ತರ ಪ್ರದೇಶಕ್ಕೆ ತೆರಳಲು ಮೇ 19 ರಂದು ರಾತ್ರಿ 8 ಗಂಟೆಗೆ ರೈಲ್ವೆ ಇಲಾಖೆಯಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.
ರೈಲು ಮುಖಾಂತರ ಪ್ರಯಾಣ ಬೆಳೆಸಲಿಚ್ಛಿಸುವ ಉತ್ತರ ಪ್ರದೇಶದ ವಲಸೆ ಕಾರ್ಮಿಕರು ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.
ಈ ರೈಲಿನಲ್ಲಿ ಪ್ರಯಾಣ ಬೆಳೆಸಲು ಇಚ್ಛಿಸುವ ಉತ್ತರ ಪ್ರದೇಶ ರಾಜ್ಯದ ವಲಸೆ ಕಾರ್ಮಿಕರು ಕಲಬುರಗಿ ಜಿಲ್ಲಾ ಕಾರ್ಮಿಕ ಅಧಿಕಾರಿ ಹಾಗೂ ನೋಡಲ್ ಅಧಿಕಾರಿ ಶ್ರೀಹರಿ ದೇಶಪಾಂಡೆ ಇವರನ್ನು ಮೊಬೈಲ್ ಸಂಖ್ಯೆ 8660952314, 9164046824 ಗಳಿಗೆ ಸಂಪರ್ಕಿಸಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.