ಭಾರತದಲ್ಲಿ ಇದುವರೆಗೆ 1700 ಕೊರೊನಾ ವೈರಸ್‌ನ ಹೊಸ ರೂಪಾಂತರ ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ 639 ಜನರು ಸೋಂಕು ಮುಕ್ತರಾಗಿದ್ದಾರೆ.
ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಮಿಕ್ರಾನ್ ಸೋಂಕು ಹರಡಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 510 ಪ್ರಕರಣಗಳು ದಾಖಲಾಗಿವೆ. ದಿಲ್ಲಿ 351, ಕೇರಳ 156, ಗುಜರಾತ್ 136, ತಮಿಳುನಾಡಿನಲ್ಲಿ 121 ಮತ್ತು ರಾಜಸ್ಥಾನದಲ್ಲಿ 120 ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.
ಕರ್ನಾಟಕದಲ್ಲಿ ಈವರೆಗೆ 76 ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ