ರಾಜಧಾನಿಯಲ್ಲಿರುವ ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಮನೆಗೆ ನಿನ್ನೆ ಸಂಜೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. ರಾಷ್ಟ್ರ ಶ್ರೀಲಂಕಾದಲ್ಲಿ ಹದಗೆಟ್ಟಿರುವ ಆರ್ಥಿಕ ಬಿಕ್ಕಟ್ಟಿನಿಂದ ಜನರು ರೊಚ್ಚಿಗೆದ್ದು ಕೃತ್ಯವೆಸಗಿದ್ದು ಪ್ರಧಾನಮಂತ್ರಿ ಕಚೇರಿಯಾಗಿದೆ.'ಪ್ರತಿಭಟನಾಕಾರರು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಖಾಸಗಿ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ' ಎಂದು ಲಂಕಾ ಪ್ರಧಾನಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪ್ರತಿಭಟನಾಕಾರರು ಪ್ರಧಾನಿಯವರ ವಾಹನಗಳಿಗೆ ಹಾನಿ ಮಾಡುತ್ತಿರುವುದು ಕಂಡುಬಂದಿದೆ. ಮೇ ತಿಂಗಳಿನಲ್ಲಿ ಪ್ರಧಾನ ಮಂತ್ರಿಯಾಗಿ ನೇಮಕಗೊಂಡಿದ್ದ ವಿಕ್ರಮಸಿಂಘೆ ಅವರು ಸರ್ಕಾರದ ಮುಂದುವರಿಕೆ ಮತ್ತು ಎಲ್ಲಾ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.