Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಜೆಡಿಎಸ್ ಸೇರ್ಪಡೆಯತ್ತ ಮಾಜಿ ಸಚಿವ ಶ್ರೀನಿವಾಸ್‌ಪ್ರಸಾದ್ ಚಿತ್ತ?

ಜೆಡಿಎಸ್ ಸೇರ್ಪಡೆಯತ್ತ ಮಾಜಿ ಸಚಿವ ಶ್ರೀನಿವಾಸ್‌ಪ್ರಸಾದ್ ಚಿತ್ತ?
ಮೈಸೂರು , ಬುಧವಾರ, 12 ಅಕ್ಟೋಬರ್ 2016 (15:08 IST)
ಸಚಿವ ಸ್ಥಾನ ಕಳೆದುಕೊಂಡು ಅಸಮಾಧಾನಗೊಂಡಿದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವಿರುದ್ಧ ರೂಪಿಸಿದ್ದ ಷಡ್ಯಂತ್ರದ ಕಾರಣದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ನೇರವಾಗಿ ಆರೋಪಿಸಿದ ಅವರು, ಅಕ್ಟೋಬರ್ 17 ರಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
 
ಮೈಸೂರಿನ ನಂಜನಗೂಡಿನಲ್ಲಿ ಮಾತನಾಡಿದ ಅವರು, ಕೆಲವು ವಿಷಯಗಳನ್ನು ಪಕ್ಷದಲ್ಲಿದುಕೊಂಡೇ ಹೇಳುವಷ್ಟು ಅವಿವೇಕಿ ನಾನಲ್ಲ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಹೇಳಿಕೆ ನೀಡದಿರುವಷ್ಟು ಅನುಭವವಿಲ್ಲದ ರಾಜಕಾರಣಿ ನಾನಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ವಿರುದ್ಧ ರೂಪಿಸಿದ್ದ ಷಡ್ಯಂತ್ರವನ್ನು ಬಹಿರಂಗಪಡಿಸುತ್ತೇನೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ. 
 
ಯಾವುದೇ ಕಾರಣವಿಲ್ಲದೇ ಸಚಿವ ಸಂಪುಟದಿಂದ ಕೈಬಿಟ್ಟಿದ್ದ ಹಿನ್ನೆಲೆಯಲ್ಲಿ ಶ್ರೀನಿವಾಸ್ ಪ್ರಸಾದ್ ಅವರು ಅಸಮಾಧಾನಗೊಂಡಿದ್ದರು. ಇದೀಗ ತಮ್ಮ ಶಾಸಕ ಸ್ಥಾನಕ್ಕೆ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಪಕ್ಷ ಸೇರುತ್ತಾರೆ ಎಂದು ಹೇಳಲಾಗುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಜಯಲಲಿತಾರ ಎಲ್ಲ ಖಾತೆಗಳು ಪನೀರ್ ಸೆಲ್ವಂ ಹೆಗಲಿಗೆ