Publish Date: Mon, 06 Jul 2020 (09:48 IST)
Updated Date: Mon, 06 Jul 2020 (09:54 IST)
ಬೆಂಗಳೂರು : ಆರೋಗ್ಯ ಇಲಾಖೆ ಉಪಕರಣ ಖರೀದಿಯಲ್ಲಿ ಅಕ್ರಮ ಆರೋಪ ಸಿದ್ದರಾಮಯ್ಯ ನ ಆರೋಪಕ್ಕೆ ಆರೋಗ್ಯ ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಬಿ.ಶ್ರೀರಾಮುಲು , ಸಿದ್ದರಾಮಯ್ಯನವರೇ, ನಾಡು ಸಂಕಷ್ಟದಲ್ಲಿದೆ. ಜನರು ಸಮಸ್ಯೆಯಲ್ಲಿದ್ದಾರೆ, ಕೊರೊನಾ ಗೆಲ್ಲಬೇಕಿದೆ. ಇದು ಕೆಲಸ ಮಾಡೋ ಸಮಯ, ಕೆಲಸ ಮಾಡಲು ಬಿಡಿ. ನಿಮ್ಮಿಂದ ಇಷ್ಟು ಕನಿಷ್ಠ ಮಟ್ಟದ ಸಹಕಾರವನ್ನು ಕೇಳುತ್ತೇನೆ. ಜನತೆಯ ಪರವಾಗಿ ನಾನು ಸಹಕಾರವನ್ನು ಕೇಳುತ್ತಿದ್ದೇನೆ ಎಂದು ಸಿದ್ದರಾಮಯ್ಯ ಆರೋಪಕ್ಕೆ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಧಾನಿ ಮೋದಿ, ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ನೀವು ಆರೋಪ ಮಾಡುತ್ತಿದ್ದೀರಿ. ಅದಕ್ಕೂ ಮುನ್ನ ನಿಮ್ಮ ಪಕ್ಷದ ಬಗ್ಗೆ ಗಮನ ಹರಿಸಿದರೆ ಒಳಿತು. ಕಾಶ್ಮೀರದಿಂದ- ಕನ್ಯಾಕುಮಾರಿಯವರೆಗೂ ಆರೋಪ ಮಾಡಿ. ಆರೋಪಿಗಳಾಗಿರುವ ನಿಮ್ಮ ಪಕ್ಷದವರ ಬಗ್ಗೆ ಗಮನ ಕೊಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗೆ ಶ್ರೀರಾಮುಲು ಸಲಹೆ ನೀಡಿದ್ದಾರೆ.