Webdunia - Bharat's app for daily news and videos

Install App

ಇಂದು ಎಸ್ಎಸ್ಎಲ್ಸಿ 2ನೇ ಪರೀಕ್ಷೆ

Webdunia
ಗುರುವಾರ, 22 ಜುಲೈ 2021 (11:19 IST)
ಬೆಂಗಳೂರು(ಜು.22): ರಾಜ್ಯಾದ್ಯಂತ ಇಂದು ಎಸ್ಎಸ್ಎಲ್ಸಿ ಎರಡನೇ ಪರೀಕ್ಷೆ ನಡೆಯಲಿದೆ. ಕನ್ನಡ, ಇಂಗ್ಲಿಷ್, ಹಿಂದಿ ಮೂರು ಭಾಷಾ ವಿಷಯಗಳಿಗೆ ಇಂದು ಪರೀಕ್ಷೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗ್ಗೆ 10.30ರಿಂದ 1.30ರವರೆಗೆ ಒಟ್ಟು ಮೂರು ವಿಷಯಗಳಿಗೆ 120 ಅಂಕಗಳ ಪರೀಕ್ಷೆ ನಡೆಯಲಿದೆ.


ಜುಲೈ 19ರಂದು ಅಂದರೆ ಕಳೆದ ಸೋಮವಾರ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಮೂರು ವಿಷಯಗಳಿಗೆ ಪರೀಕ್ಷೆ ನಡೆದಿತ್ತು.  ಇಂದು ಉಳಿದ ಭಾಷಾ ವಿಷಯಗಳಾದ ಕನ್ನಡ, ಇಂಗ್ಲಿಷ್, ಹಿಂದಿ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ.
ಈ ಬಾರಿ  ಆಬ್ಜೆಕ್ಟಿವ್ ಮಾದರಿಯಲ್ಲಿ, ಓಎಂಆರ್ ಶೀಟ್ ನಲ್ಲಿ ಎಸ್ಎಸ್ಎಲ್ ಪರೀಕ್ಷೆ ನಡೆಸಲಾಗುತ್ತಿದೆ.  ಪ್ರತಿಯೊಂದು ವಿಷಯಕ್ಕೂ ಒಎಂಆರ್ ಶೀಟ್ನಲ್ಲಿ ಒಂದೊಂದು ಬಣ್ಣ ಕೊಡಲಾಗಿರುತ್ತದೆ. ವಿದ್ಯಾರ್ಥಿಗಳಿಗೆ ಸರಳವಾಗಿ ಅರ್ಥವಾಗಲು ವಿವಿಧ ಬಣ್ಣದಲ್ಲಿ ಓ ಎಂಆರ್ ಶೀಟ್ ನೀಡಲಾಗುತ್ತದೆ. ಒಂದು ಪರೀಕ್ಷಾ ಕೊಠಡಿಯಲ್ಲಿ 12 ಮಕ್ಕಳು ಮಾತ್ರ ಕೂತು ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಕೆಮ್ಮು, ನೆಗಡಿ, ಜ್ವರ ಇರುವವರಿಗೆ ವಿಶೇಷ ಕೊಠಡಿಯಲ್ಲಿ ಕೂತು ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
ಪರೀಕ್ಷೆಗೆ 8,76,581 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದಾರೆ. 4,72,643 ಬಾಲಕರು, 403938 ಬಾಲಕಿಯರು ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿದ್ದಾರೆ.  ಒಟ್ಟು 14,927 ಶಾಲೆಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಒಟ್ಟು ಪರೀಕ್ಷಾ ಕೇಂದ್ರಗಳ ಸಂಖ್ಯೆ- 4884, ಸರ್ಕಾರಿ–1831, ಅನುದಾನಿತ- 1294, ರಾಜ್ಯಾದ್ಯಂತ 73066 ಪರೀಕ್ಷಾ ಕೊಠಡಿಗಳಿವೆ.  ಮುಖ್ಯಅಧೀಕ್ಷಕರು–4884,  ಪ್ರಶ್ನೆಪತ್ರಿಕೆ ಅಭಿರಕ್ಷಕರು–4884,  ಕೊಠಡಿ ಮೇಲ್ವಿಚಾರಕರು–80389,  4884 ಸ್ಥಾನಿಕ ಜಾಗೃತ ದಳದವರನ್ನು ನೇಮಿಸಲಾಗಿದೆ.
ಪರೀಕ್ಷಾ ಕೇಂದ್ರಗಳು  ಸುರಕ್ಷಾ ಕೇಂದ್ರಗಳಾಗಿವೆ. ಪ್ರತಿದಿನವೂ ಪರೀಕ್ಷೆ ಆರಂಭಕ್ಕೂ ಮುನ್ನ ಮತ್ತು ಪರೀಕ್ಷೆ ನಂತರ ಸ್ಯಾನಿಟೈಸ್ ಮಾಡಲಾಗುತ್ತಿದೆ. ಎಲ್ಲಾ ಜಿಲ್ಲೆಗೆ ಒಬ್ಬೊಬ್ಬ ನೋಡೆಲ್ ಆಫೀಸರ್ನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರದ 200ಮೀ. ಸುತ್ತ ನಿಷೇಧಾಜ್ಞೆ ಜಾರಿ  ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಬಟ್ಟೆಯ ಮಾಸ್ಕ್ ಅಥವಾ ಸರ್ಜಿಕಲ್ ಮಾಸ್ಕ್ ವಿತರಣೆ ಮಾಡಲಾಗುತ್ತದೆ.ಪರೀಕ್ಷಾ ಕೇಂದ್ರಗಳಲ್ಲೆ ಆರೋಗ್ಯ ಕೌಂಟರ್ ತೆರೆಯಲಾಗಿದೆ. ಪರೀಕ್ಷಾ ಸಿಬ್ಬಂದಿಗಳು ಮಾಸ್ಕ್, ಫೇಸ್ ಶೀಲ್ಡ್ ಧರಿಸಿರಬೇಕು. ಕೇಂದ್ರಗಳಲ್ಲೆ ತುರ್ತು ಚಿಕಿತ್ಸಾ ವಾಹನಗಳ ವ್ಯವಸ್ಥೆ ಮಾಡಲಾಗಿದೆ.  ಕೋವಿಡ್ ಬಂದಂತ ವಿದ್ಯಾರ್ಥಿಗಳು ಆರೋಗ್ಯವಾಗಿದ್ದರೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments