ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳುವ ಹೊಣೆಗಾರಿಕೆ ದೈಹಿಕ ಶಿಕ್ಷಕರದ್ದಾಗಿದೆ.
ಪ್ರತಿ ಪರೀಕ್ಷಾ ಕೇಂದ್ರಕ್ಕೆ ಐದು ಮಂದಿ ದೈಹಿಕ ಶಿಕ್ಷಣ ಶಿಕ್ಷಕರನ್ನು ನಿಯೋಜಿಸಲಾಗುವುದು ಎಂದು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು 93 ಪರೀಕ್ಷಾ ಕೇಂದ್ರಗಳನ್ನು ವ್ಯವಸ್ಥೆ ಮಾಡಲಾಗಿದ್ದು, ಈಗಾಗಲೇ ಮೊದಲ ಹಂತದಲ್ಲಿ ಎಲ್ಲ ಕೇಂದ್ರಗಳಲ್ಲಿ ಸ್ಯಾನಿಟೈಸ್ ಮಾಡಲಾಗಿದೆ. ಎರಡನೇ ಹಂತದ ಸೋಂಕು ನಿವಾರಕ ಸಿಂಪಡಣೆ ಕಾರ್ಯ ನಡೆಯುತ್ತಿದೆ.
ಜಿಲ್ಲೆಯ 42 ಕಂಟೈನ್ಮೆಂಟ್ ಝೋನ್‌ಗಳ 96 ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ಕಲ್ಪಿಸಲಾಗಿದ್ದು, ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿರುವ 3 ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಿಲ್ಲ ಎಂದಿದ್ದಾರೆ.