ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಬಹಿರಂಗಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 14 ಬಾಲಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆಪ್ ಒಂದರಲ್ಲಿ ರಾಕೇಶ್ ಎಂಬಾತ ಎಸ್ ಎಸ್ ಎಲ್ ಸಿ ಗಣಿತ ವಿಷಯದ ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿದ್ದನು. ಈ ಕಾರಣದಿಂದಾಗಿ ಒಟ್ಟು 14 ಜನ ವಿದ್ಯಾರ್ಥಿಗಳನ್ನು ಬಂಧಿಸಿ ತನಿಖೆ ಮುಂದುರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಕೇಸ್ ದಾಖಲಾಗಿದ್ದು, ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಿರ್ದೇಶಕರು ದೂರನ್ನು ದಾಖಲು ಮಾಡಿದ್ದಾರೆ.