Publish Date: Fri, 13 May 2022 (15:44 IST)
Updated Date: Fri, 13 May 2022 (15:50 IST)
ಮೇ 19ರಂದು ಎಸ್‌ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಬಿ.ಸಿ. ನಾಗೇಶ್ ಹೇಳಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡುವ ವೇಳೆ ಮಾತನಾಡಿದ ಅವರು, SSLC ಪರೀಕ್ಷೆ ಫಲಿತಾಂಶದ ಬಗ್ಗೆ ಮಾಹಿತಿ ನೀಡಿದ್ದಾರೆ. ಇನ್ನೂ ಮೇ 19 ರಂದು SSLC ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಸಚಿವ ಬಿ.ಸಿ ನಾಗೇಶ್ ಟ್ವೀಟ್ ಕೂಡ ಮಾಡಿದ್ದಾರೆ. ಸಾಲು ಸಾಲು ರಜೆಗಳು ಬಂದ ಕಾರಣ, ಮೌಲ್ಯಮಾಪನ ಕೊಂಚ ವಿಳಂಬವಾಗಿತ್ತು. ಮೌಲ್ಯಮಾಪನ ಕಾರ್ಯ ಪೂರ್ಣಗೊಂಡ ನಂತರ ಅಂಕಗಳ ದಾಖಲೀಕರಣ ಪೂರ್ಣಗೊಳಿಸಿ ಮೇ 19 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.