ಬೆಂಗಳೂರು(ಆ.09): ಕಳೆದ ಜುಲೈನಲ್ಲಿ ನಡೆದಿದ್ದ 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ. ಪರೀಕ್ಷೆ ಬರೆದಿರುವ ಎಲ್ಲರನ್ನೂ ಉತ್ತೀರ್ಣಗೊಳಿಸುವುದಾಗಿ ಸರ್ಕಾರ ಈಗಾಗಲೇ ಘೋಷಿಸಿದ್ದು, ಅಂಕ ಆಧಾರಿತ ಫಲಿತಾಂಶ ಪ್ರಕಟವಾಗಲಿದೆ.
ಪರೀಕ್ಷೆ ಬರೆದಿರುವ 8.76 ಲಕ್ಷ ವಿದ್ಯಾರ್ಥಿಗಳ ಪೈಕಿ ಯಾರು ಎಷ್ಟುಪ್ರಮಾಣದ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿರುತ್ತಾರೋ ಅದರ ಆಧಾರದ ಮೇಲೆ ಪ್ರತಿಯೊಬ್ಬರ ಅಂಕ ಆಧಾರಿತ ಫಲಿತಾಂಶ https://ssslc.karnataka.gov.in ನಲ್ಲಿ ಲಭ್ಯವಿರುತ್ತದೆ. ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ನೋಂದಣಿ ಸಂಖ್ಯೆ ನಮೂದಿಸಿ ಫಲಿತಾಂಶ ವೀಕ್ಷಿಸಬಹುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಕಾರಿಗಳು ಹೇಳಿದ್ದಾರೆ.
ಸೋಮವಾರ ಮಧ್ಯಾಹ್ನ 3.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ನೂತನ ಸಚಿವ ಬಿ.ಸಿ.ನಾಗೇಶ್ ಅವರು ಮಲ್ಲೇಶ್ವರದ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ.