ನಾಳೆಯಿಂದ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ನಡೆಯುತ್ತಿದ್ದು 94,649 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ. 423 ಕೇಂದ್ರಗಳಲ್ಲಿ ನಾಳೆಯಿಂದ ಜುಲೈ 4 ವರೆಗೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ. ಜೂನ್ 27 ವಿಜ್ಞಾನ, ರಾಜ್ಯಶಾಸ್ತ್ರ, ಜೂನ್ 28 ಪ್ರಥಮ ಭಾಷೆ, ಜೂನ್ 29 ದ್ವಿತೀಯ ಭಾಷೆ, ಜೂನ್ 30 ಸಮಾಜವಿಜ್ಞಾನ, ಜುಲೈ 2 ಎಲಿಮೆಂಟ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಅರ್ಥಶಾಸ್ತ್ರ ನಡೆಯಲಿದೆ.