Webdunia - Bharat's app for daily news and videos

Install App

ಮಹಾಕುಂಭಮೇಳದಲ್ಲಿ ಕಾಲ್ತುಳಿತ: ಚಿತ್ರದುರ್ಗದ ಗುರುಪೀಠದ ನಾಗಸಾಧು ಸಾವು

Sampriya
ಶುಕ್ರವಾರ, 31 ಜನವರಿ 2025 (18:54 IST)
Photo Courtesy X
ಚಿತ್ರದುರ್ಗ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭಮೇಳದಲ್ಲಿ ನಡೆದಿದ್ದ ಕಾಲ್ತುಳಿತದಲ್ಲಿ ನಗರದ ಬಂಜಾರ ಗುರುಪೀಠದ ನಾಗಸಾಧುನಾಗನಾಥ್‌ ಮಹರಾಜ್‌ (48) ಅವರು ಮೃತಪಟ್ಟಿದ್ದಾರೆ. ಈ ವಿಷಯವನ್ನು ಬಂಜಾರ ಗುರುಪೀಠದ ಸೇವಾಲಾಲ್ ಸ್ವಾಮೀಜಿ ಖಚಿತಪಡಿಸಿದ್ದಾರೆ.

ತಾಲ್ಲೂಕಿನ ಸಿಬಾರದಲ್ಲಿರುವ ಬಂಜಾರ ಗುರುಪೀಠದಲ್ಲಿ ನಾಗನಾಥ್‌ ಮಹರಾಜ್‌ 7 ವರ್ಷಗಳಿಂದ ವಾಸಿಸುತ್ತಿದ್ದರು. 15 ದಿನಗಳ ಹಿಂದಷ್ಟೇ ಕುಂಭಮೇಳದಲ್ಲಿ ಪಾಲ್ಗೊಳ್ಳಲು ಪ್ರಯಾಗ್‌ರಾಜ್‌ಗೆ ತೆರಳಿದ್ದರು. ಇದೀಗ ಅಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಗುರುಪೀಠದ ಸೇವಾವಾಲ್ ಸ್ವಾಮೀಜಿ ಅವರು, ಪವಾಡಪುರುಷರಾಗಿದ್ದ ಅವರು ನಮ್ಮ  ಗುರುಪೀಠಕ್ಕೆ ಬಂದಿದ್ದೇ ಆಶ್ಚರ್ಯ. ಅವರ ಮೂಲ ಯಾವುದು ಎಂಬುದು ಯಾರಿಗೂ ಗೊತ್ತಿಲ್ಲ. ಅವರ ಸಾವಾಗಿರುವುದು ನೋವು ತಂದಿದೆ. ಕುಂಭಮೇಳದಲ್ಲಿ ಪಾಲ್ಗೊಳ್ಳಲು ಹಂತ ಹಂತವಾಗಿ ಭಕ್ತರನ್ನು ಬಿಡುತ್ತಿದ್ದರೆ ಈ ಅನಾಹುತ ಆಗುತ್ತಿರಲಿಲ್ಲ ಎಂದರು,

ಪ್ರಯಾಗ್‌ರಾಜ್‌ನಲ್ಲಿ ಅನಾಥವಾಗಿರುವ ಮಹಾನ್ ಜ್ಞಾನಿಯಾಗಿದ್ದ ನಾಗನಾಥ್‌ ಮಹರಾಜ್‌ ಅವರ ಪಾರ್ಥಿವ ಶರೀರವನ್ನು ಕೂಡಲೇ ಕರ್ನಾಟಕ ಸರ್ಕಾರ ಅವರ ಮೃತಹದೇಹವನ್ನು ತರಲು ವ್ಯವಸ್ಥೆ ಮಾಡಬೇಕು. ಪಾರ್ಥಿವ ಶರೀರವನ್ನು ಮಠಕ್ಕೆ ನೀಡಿದರೆ ಧಾರ್ಮಿಕ ವಿಧಿವಿಧಾನಗಳ ಮೂಲಕ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

ಮುಂದಿನ ಸುದ್ದಿ
Show comments