Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮಾರ್ಚ್ 4 ರಿಂದ ಪಿ.ಯು.ಸಿ. ವಾರ್ಷಿಕ ಪರೀಕ್ಷೆ: ಡಿಸಿ ನೀಡಿದ್ರು ಖಡಕ್ ಎಚ್ಚರಿಕೆ

ಮಾರ್ಚ್ 4 ರಿಂದ ಪಿ.ಯು.ಸಿ. ವಾರ್ಷಿಕ ಪರೀಕ್ಷೆ: ಡಿಸಿ ನೀಡಿದ್ರು ಖಡಕ್ ಎಚ್ಚರಿಕೆ
ಕಲಬುರಗಿ , ಶನಿವಾರ, 29 ಫೆಬ್ರವರಿ 2020 (19:57 IST)
ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯು ಮಾರ್ಚ್ 4 ರಿಂದ 23ರ ವರೆಗೆ  ಜರುಗಲಿವೆ.

ಕಲಬುರಗಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸುಸೂತ್ರವಾಗಿ ಪರೀಕ್ಷೆ ನಡೆಯಲು ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ರೂಟ್ ಅಧಿಕಾರಿಗಳು ಮತ್ತು ಪರೀಕ್ಷಾ ಕೇಂದ್ರದ ಮುಖ್ಯ ಮೇಲ್ವಿಚಾರಕರ ಸಭೆಯ  ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕಲಬುರಗಿ ನಗರದ 25 ಕೇಂದ್ರ ಮತ್ತು ತಾಲೂಕಾ ಹಂತದಲ್ಲಿನ 22 ಕೇಂದ್ರಗಳು ಸೇರಿದಂತೆ ಒಟ್ಟು 47 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. 15067 ಪುರುಷ ವಿದ್ಯಾರ್ಥಿಗಳು ಹಾಗೂ 14348 ಮಹಿಳಾ ವಿದ್ಯಾರ್ಥಿನಿಯರು ಸೇರಿ 29415 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಇದರಲ್ಲಿ 22,755 ಫ್ರೆಶರ್ಸ್, 5348 ರಿಪೀಟರ್ಸ್ ಮತ್ತು 1312 ಖಾಸಗಿ ವಿದ್ಯಾರ್ಥಿಗಳು ಸೇರಿದ್ದಾರೆ.

ಪರೀಕ್ಷೆ ಸುಗಮವಾಗಿ ಜರುಗುವಂತೆ 47 ಕೇಂದ್ರಗಳಿಗೂ ಮುಖ್ಯ ಅಧೀಕ್ಷಕರನ್ನು ನೇಮಿಸಿದೆ. ಪ್ರಶ್ನೆ ಪತ್ರಿಕೆ ತೆಗೆದುಕೊಂಡು ಹೋಗಲು ಕ್ಷೇತ್ರ ಶಿಕ್ಷಣಾಧಿಕಾರಿ ನೇತೃತ್ವದಲ್ಲಿ ಮೂರು ಜನರ 13 ರೂಟ್ ಅಧಿಕಾರಿಗಳ ತಂಡ ರಚಿಸಲಾಗಿದ್ದು, ಈ ವಾಹನಕ್ಕೆ  ಜಿ.ಪಿ.ಆರ್.ಎಸ್. ಸಹ ಅಳವಡಿಸಲಾಗಿದೆ. ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರದಲ್ಲಿ ಸಿ.ಸಿ.ಟಿ.ವಿ. ಅಳವಡಿಸಲಾಗಿದೆ.

ಪರೀಕ್ಷಾ ಕೇಂದ್ರದ ಅಧೀಕ್ಷಕರು ಕೇಂದ್ರದಲ್ಲಿಯೆ ಹಾಜರಿದ್ದು, ಪಿಯು.ಸಿ. ಮಂಡಳಿಯ ನಿರ್ದೇಶನದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಕೇಂದ್ರದ ಅಧೀಕ್ಷಕರಿಗೆ ಸೂಚನೆ ನೀಡಿದರು. ಪರೀಕ್ಷಾ ಆರಂಭಗೊಳ್ಳುವ ಮುನ್ನ ಪರೀಕ್ಷಾ ಕೇಂದ್ರದಲ್ಲಿ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ, ಮೇಜು, ಬೆಳಕಿನ ವ್ಯವಸ್ಥೆ ಬಗ್ಗೆ ಅಧೀಕ್ಷಕರು ಮುಂಚೆಯೆ ಖಾತ್ರಿ ಪಡಿಸಿಕೊಳ್ಳಬೇಕು.  ಪರೀಕ್ಷಾ ದಿನದಂದು ಕೇಂದ್ರದ ಪ್ರವೇಶ ಸ್ಥಳದಲ್ಲಿಯೆ ಪುರುಷ ಮತ್ತು ಮಹಿಳಾ ಸಿಬ್ಬಂದಿಯಿಂದ ಪ್ರತ್ಯೇಕವಾಗಿ ವಿದ್ಯಾರ್ಥಿಗಳನ್ನು ಫ್ರಿಸ್ಕಿಂಗ್ ಮಾಡಿಯೆ ಒಳಗಡೆ ಬಿಡಬೇಕು. ಪೊಲೀಸ್ ಬಂದೋಬಸ್ತ್‍ಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು ಎಂದರು.




Share this Story:

Follow Webdunia kannada

ಮುಂದಿನ ಸುದ್ದಿ

ನೂತನ ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ : ಬಜೆಟ್ ನಲ್ಲಿ ಘೋಷಣೆ ಆಗುತ್ತಾ