ಬೆಂಗಳೂರು : ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ 2021-2022ರ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಇದರಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆಗಳನ್ನು ರೂಪಿಸಲಾಗಿದೆ.
ರಾಜ್ಯ ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ 6 ತಿಂಗಳು ಪ್ರಸೂತಿ ರಜೆ, ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗಕ್ಕೆ ಅವಕಾಶ, ಮಹಿಳಾ ಉದ್ಯಮಿಗಳಿಗೆ ಶೇ.4ರ ಬಡ್ಡಿ ದರದಲ್ಲಿ ಸಾಲ, 2 ಕೋಟಿ ರೂ.ವರೆಗೂ ಮಹಿಳಾ ಉದ್ಯಮಿಗಳಿಗೆ ಸಾಲ. ಹಪ್ಪಳ, ಉಪ್ಪಿನಕಾಯಿ ತಯಾರಕರಿಗೆ ಆನ್ ಲೈನ್ ಮಾರುಕಟ್ಟೆ, ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ರಿಯಾಯಿತಿ ಬಸ್ ಪಾಸ್, ಬೆಂಗಳೂರಿನಲ್ಲಿ ನಿರ್ಭಯಾ ಯೀಜನೆಯಲ್ಲಿ 7500 ಸಿಸಿ ಕ್ಯಾಮರಾ, ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ.10ರಷ್ಟು ಮೀಸಲಾತಿ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.