ರಾಜ್ಯ ಉಸ್ತುವಾರಿ ಹೊಂದಿರುವ ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಲಿವೆ.
ದಿಗ್ವಿಜಯ್ ಸಿಂಗ್ ಅವರನ್ನು ಭೇಟಿ ಮಾಡಲಿರುವ ಸಿಎಂ ಸಿದ್ದರಾಮಯ್ಯ, ಪರಿಷತ್ ನಾಮಕರಣ ಕುರಿತಂತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ರಾಜ್ಯ ಸಚಿವ ಸಂಪುಟದಲ್ಲಿ ಖಾಲಿಯಿರುವ ಎರಡು ಸ್ಥಾನಗಳ ಭರ್ತಿ, ಇತರ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ ಕುರಿತಂತೆ ಕೂಡಾ ಚರ್ಚೆ ನಡೆಯಲಿದೆ ಎನ್ನಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿರುವ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್, ಸಚಿವ ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್ ಮತ್ತು ಸಂಸದ ಕೆ.ಎಚ್.ಮುನಿಯಪ್ಪ ಅವರನ್ನು ಭೇಟಿ ಮಾಡಲಿರುವ ದಿಗ್ವಿಜಯ್ ಸಿಂಗ್ ಅವರ ಅಭಿಪ್ರಾಯಗಳನ್ನು ಪಡೆದು ಹೈಕಮಾಂಡ್‌ಗೆ ರವಾನಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.