ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ಜನತೆಗೆ ಕುಡಿಯುವ ನೀರು ನೀಡಲು ರಾಜ್ಯ ಸರಕಾರಕ್ಕೆ ಸಾಧ್ಯವಿಲ್ಲವೇ ಎಂದು ರೈತ ಮುಖಂಡ ಹಾಗೂ ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆಗೆ ನೀರು ನೀಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಹೇಳುತ್ತಿದೆ. ಕಾವೇರಿ ವಿಚಾರವಾಗಿ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡಲಾಗುತ್ತಿಲ್ಲ ಎಂದು ಆರೋಪಿಸಿದರು.
ಕಾವೇರಿ ವಿಷಯದಲ್ಲಿ ಯಾರು ರಾಜಕೀಯ ಮಾಡಬಾರದು. ವಿವಾದಕ್ಕೆ ಎಲ್ಲರೂ ಸ್ಪಂದಿಸಬೇಕು ಎಂದು ಸಿಎಂ ನೇತೃತ್ವದ ಸರ್ವಪಕ್ಷ ಸಭೆ ಬಹಿಷ್ಕರಿಸಿರುವ ಬಿಜೆಪಿ ನಾಯಕರಲ್ಲಿ ರೈತ ಮುಖಂಡ ಹಾಗೂ ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ಮನವಿ ಮಾಡಿಕೊಂಡರು.
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್ ಆದೇಶ ಧಿಕ್ಕರಿಸುವ ತಾಕತ್ ಇಲ್ಲ. ನೀರಾವರಿ ಸಚಿವ ಎಂ.ಬಿ.ಪಾಟೀಲ್ ಹಾಗೂ ರಾಜ್ಯ ಪರ ವಕೀಲ ನಾರಿಮನ್ ಅವರನ್ನು ಬದಲಾಯಿಸುವಂತೆ ಬಿಜೆಪಿ ಆಗ್ರಹಿಸಿದೆ. ಆದರೆ, ಅವರನ್ನು ಬದಲಾಯಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ನಿನ್ನೆ ಸಿಎಂ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯನ್ನು ಬಿಜೆಪಿ ಬಹಿಸ್ಕರಿಸಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ