ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿರುವುದರಿಂದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರವನ್ನು ಕಿತ್ತೊಗೆಯಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸಿದ್ದರಾಮಯ್ಯ ಸರಕಾರ ತುಘಲಕ್ ದರ್ಬಾರ್ ಮಾಡುತ್ತಿದೆ. ದೇಶದಲ್ಲಿಯೇ ರಾಜ್ಯ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಸ್ಥಾನ ಪಡೆದಿರುವುದೇ ಸರಕಾರದ ಸಾಧನೆಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕೃಷ್ಣ ಮೇಲ್ದಂಡೆ ಯೋಜನೆಯಲ್ಲಿ ಹಣ ಲೂಟಿ ಮಾಡಲಾಗಿದೆ. ಎಂ.ಬಿ.ಪಾಟೀಲ್‌ಗೆ ನೈತಿಕತೆಯಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಸಚಿವ ಪಾಟೀಲ್, ನನ್ನ ವಿರುದ್ಧ ತುಂಬಾ ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಂದೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಲ್ಲಿ ಜಲಸಂಪನ್ಮೂಲ ಇಲಾಖೆಯಲ್ಲಿ ನಡೆದ ಭ್ರಷ್ಟಾಚಾರಗಳ ತನಿಖೆ ನಡೆಸಿ ನಾನೇನು ಎನ್ನುವುದನ್ನು ಸಚಿವ ಪಾಟೀಲ್‌ಗೆ ತೋರಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಬ್ಬರಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.