ಕರ್ನಾಟಕ ರಾಜ್ಯ ಪೊಲೀಸರಿಗೆ ಒಂದು ತಿಂಗಳ ಹೆಚ್ಚುವರಿ ವೇತನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬೆಂಗಳೂರಿಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಪೊಲೀಸರಿಗೆ ಒಂದು ವರ್ಷದಲ್ಲಿ 13 ತಿಂಗಳ ವೇತನ ಜೊತೆಗೆ ಪೊಲೀಸ್ ಇಲಾಖೆಗೆ 90 ಪ್ರತಿಶತ ಸೌಲಭ್ಯ ನೀಡಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆದೇಶ ಹೊರಡಿಸಿದೆ.
ಪೊಲೀಸ್‌ರಿಗೆ ಪ್ರತಿ 10 ವರ್ಷಕ್ಕೊಮ್ಮೆ ಬಡ್ತಿ ನೀಡುವುದರ ಜೊತೆಗೆ ಆರ್ಡರ್ಲಿ ಪದ್ಧತಿಯನ್ನು ರದ್ದುಗೊಳಿಸುವುದಾಗಿ ರಾಜ್ಯ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಪ್ರಸಕ್ತ ಸಾಲಿನಲ್ಲಿ 7815 ಪೊಲೀಸ್ ಪೇದೆ ಹಾಗೂ 711 ಸಬ್‌ಇನ್ಸ್‌ಪೆಕ್ಟರ್‌ಗಳ ನೇಮಕ ಪ್ರಕ್ರಿಯೆಗೆ ಸಮ್ಮತಿ ನೀಡಲಾಗಿದೆ ಎಂದು ತಿಳಿಸಿದರು.
ಕಪ್ಪು ಸರದಾರರನ್ನು ಸದೆಬಡೆಯುವಲ್ಲಿ ನಮ್ಮ ಬೆಂಬಲವೂ ಇದೆ. ಆದರೆ, ಕೇಂದ್ರ ಸರಕಾರ ಪೂರ್ವ ಸಿದ್ಧತೆ ಇಲ್ಲದೆ ಏಕಾಏಕಿ ನೋಟ್ ಬ್ಯಾನ್ ಮಾಡಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಜನತೆಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಹಕಾರಿ ಬ್ಯಾಂಕ್‌ಗಳಲ್ಲಿಯೂ ನೋಟ್ ಬದಲಾವಣೆಗೆ ಅವಕಾಶ ನೀಡಿ ಎಂದು ಆರ್‌ಬಿಐ ಗವರ್ನರ್ ಅವರಿಗೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ