ಬೆಂಗಳೂರು : ಲೋಕಸಭಾ ಚುನಾವಣೆ ಮುಗಿಯುತ್ತಿರುವ ಈ ಬೆನ್ನಲ್ಲೇ ಇದೀಗ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಚುನಾವಣಾಧಿಕಾರಿ ಮುಹೂರ್ತ ಘೋಷಣೆ ಮಾಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿರುವ ಚುನಾವಣಾಧಿಕಾರಿಗಳು, ರಾಜ್ಯದ 8 ನಗರ ಸಭೆ, 33 ಪುರಸಭೆ, 22 ಪಟ್ಟಣ ಪಂಚಾಯತಿ, 63 ಸ್ಥಳೀಯ ಸಂಸ್ಥೆಗಳಿಗೆ ಹಾಗೂ 1,361 ವಾರ್ಡ್ ಗಳಿಗೆ ಮೇ 29 ರಂದು ಚುನಾವಣೆ ನಡೆಯುವುದಾಗಿ ಘೋಷಣೆ ಮಾಡಿದ್ದಾರೆ.
ಹಾಗೇ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ನಾಮಪತ್ರ ಸಲ್ಲಿಕೆಯು ಮೇ 9 ರಿಂದ ಶುರುವಾಗಲಿದ್ದು, ನಾಮಪತ್ರ ಸಲ್ಲಿಸಲು ಮೇ 16 ಕೊನೆಯ ದಿನವಾಗಿದೆ. ಮೇ 29 ರಂದು ಮತದಾನ ನಡೆಯಲಿದ್ದು, ಮೇ 31ಕ್ಕೆ ಫಲಿತಾಂಶ ಪ್ರಕಟವಾಗಲಿರುವುದಾಗಿ ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.