ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ., ಪಿಯುಸಿ ಕ್ಲಾಸ್ ಪ್ರಾರಂಭವಾದ ಹಿನ್ನಲೆಯಲ್ಲಿ ಮಕ್ಕಳ ಆರೋಗ್ಯ, ಶೈಕ್ಷಣಿಕ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಎಚ್ಚರಿಕೆ, ಜವಾಬ್ದಾರಿಯಿಂದ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.
ಎಸ್.ಎಸ್.ಎಲ್.ಸಿ. ಪರೀಕ್ಷೆಯ ವೇಳೆಯೂ ಇದೇ ರೀತಿ ಆತಂಕ ಇತ್ತು. ಆದ್ರೆ ಸರ್ಕಾರ ಅತ್ಯಂತ ಯಶಸ್ವಿಯಾಗಿ ಪರೀಕ್ಷೆ ನಡೆಸಿತ್ತು. ಈಗಲೂ ಸಹ ಶಿಕ್ಷಣ ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ. ಕೋವಿಡ್ ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ. ಇದು ಸರ್ಕಾರದ ಧ್ಯೇಯ. ಯಾವುದೇ ಆತಂಕವಿಲ್ಲದೇ ಮಕ್ಕಳನ್ನು ಶಾಲೆಗೆ ಕಳುಹಿಸಿ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಟ್ವೀಟ್ ಮಾಡಿದ್ದಾರೆ.