Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ರಾಹುಲ್ ಗೆ ವಿಧಿಸಿದ್ದ ಶಿಕ್ಷೆಗೆ ತಡೆಯಾಜ್ಞೆ : ಪ್ರಜಾಪ್ರಭುತ್ವಕ್ಕೆ ಸಂದ ಜಯ ಎಂದ ಸಿಎಂ ಸಿದ್ದರಾಮಯ್ಯ

ರಾಹುಲ್ ಗೆ ವಿಧಿಸಿದ್ದ ಶಿಕ್ಷೆಗೆ ತಡೆಯಾಜ್ಞೆ : ಪ್ರಜಾಪ್ರಭುತ್ವಕ್ಕೆ ಸಂದ ಜಯ ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಶನಿವಾರ, 5 ಆಗಸ್ಟ್ 2023 (07:18 IST)
ಬೆಂಗಳೂರು : ಅಭಿವ್ಯಕ್ತಿ ಸ್ವಾತಂತ್ರ್ಯವಿರಬೇಕೆಂದು ಸಂವಿಧಾನದಲ್ಲಿ ಹೇಳಿರುವಂತೆ ಸರ್ವೋಚ್ಛ ನ್ಯಾಯಾಲಯ ಸಂವಿಧಾನದ ಆಶಯ ಎತ್ತಿಹಿಡಿದಿದೆ. ಇದರಿಂದ ರಾಹುಲ್ ಗಾಂಧಿಯವರಿಗೆ ನ್ಯಾಯ ದೊರೆತಿದ್ದು, ಇದು ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
 
ಅವರಿಂದು ಲಾಲ್ ಬಾಗ್ ನಲ್ಲಿ ಫಲಪುಷ್ಟಪ ಪ್ರದರ್ಶನಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ  ಶಿಕ್ಷೆಯನ್ನ ವಿಧಿಸಿ ಸೂರತ್ ನ್ಯಾಯಾಲಯ ತೀರ್ಪು ನೀಡಿತ್ತು.

ಆ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಮುಂದುವರೆಯುವ ರೀತಿಯಲ್ಲಿ ನ್ಯಾಯಾಲಯ ತೀರ್ಪು ನೀಡಿದೆ. ಈ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ಈ ನೆಲದ ಕಾನೂನನ್ನ ಎಲ್ಲರೂ ಗೌರವಿಸಬೇಕು ಕಾನೂನನ್ನು ಎತ್ತಿಹಿಡಿಯುವ ಗೌರವಿಸುವ ಕೆಲಸವನ್ನ ಸುಪ್ರೀಂ ಕೋರ್ಟ್ ಮಾಡಿದೆ ಎಂದು ಶ್ಲಾಘಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಾದ್ಯಂತ ಡಯಾಲಿಸಿಸ್ ಸೇವೆ ಬಂದ್!