Webdunia - Bharat's app for daily news and videos

Install App

ಇನ್ನೂ 2 ದಿನ ರಾಜ್ಯದಲ್ಲಿ ವ್ಯಾಪಕ ಮಳೆ

Webdunia
ಬುಧವಾರ, 21 ಜುಲೈ 2021 (07:53 IST)
Karnataka Weather Update: ಮುಂಗಾರು ಮಳೆ ಅಂದುಕೊಂಡದ್ದಕ್ಕಿಂತ ತುಸು ತಡವಾಗೇ ಬಂದರೂ ಎಲ್ಲೆಡೆ ಉತ್ತಮವಾಗೇ ಇದೆ. ಕಳೆದ ವರ್ಷಗಳಿಗೆ ಹೋಲಿಸಿದ್ರೆ ಕರ್ನಾಟಕ ರಾಜ್ಯದಲ್ಲಿ ಮಳೆಯಿಂದ ಭಾರೀ ಪ್ರಾಣಹಾನಿಯಾಗಿಲ್ಲ. ಆದರೆ ಮಳೆಗಾಲ ಇನ್ನೂ ಸಾಕಷ್ಟು ಸಮಯ ಇರುವುದರಿಂದ ಎಲ್ಲರೂ ಎಚ್ಚರಿಕೆಯಿಂದಲೇ ಇರಬೇಕಾಗಿದೆ. ನಿನ್ನೆ ರಾಜ್ಯದ ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದೆ.


ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ನಿರಂತರ ಮಳೆಯಾಗಿದೆ. ಮುಖ್ಯವಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಅತೀ ಹೆಚ್ಚು ಅಂದರೆ 12 ಸೆಂಮೀ ಮಳೆಯಾಗಿದ್ದು ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ 6 ಸೆಂ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಮಣ್ಯದಲ್ಲಿ 7 ಸೆಂ.ಮೀ ಮಳೆಯಾಗಿದೆ.
ಪೂರ್ವ ಅರಬ್ಬಿ ಸಮುದ್ರದ ಮಹಾರಾಷ್ಟ್ರ ಮತ್ತು ಕರ್ನಾಟಕದ ಪ್ರದೇಶಗಳಲ್ಲಿ ಕಡಿಮೆ ಒತ್ತಡವಿರುವ ಪ್ರದೇಶ ವಿಸ್ತರಿಸಿದೆ. ಇದರಿಂದಾಗಿ ಜುಲೈ 23ರ ವೇಳೆಗೆ ವಾಯುಭಾರ ಕುಸಿತ ಆಗುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಜುಲೈ 24ರವರಗೆ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ನ್ಯೂಸ್ 18 ಕನ್ನಡಕ್ಕೆ ತಿಳಿಸಿದ್ದಾರೆ.
ಇನ್ನು ಹಾಸನ, ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಿಗೆ ನಾಳೆ ಮತ್ತು ನಾಡಿದ್ದು ಅಂದರೆ ಜುಲೈ 22 ಮತ್ತು 23ಕ್ಕೆ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಉಳಿದಂತೆ ಬೆಳಗಾವಿ, ಧಾರವಾಡ, ಬೀದರ್, ಕಲ್ಬುರ್ಗಿ, ಬಾಗಲಕೋಟೆ ಜಿಲ್ಲೆಗಳಿಗೆ ಜುಲೈ 22 ಮತ್ತು 23ಕ್ಕೆ ಎಲ್ಲೋ ಅಲರ್ಟ್ ನೀಡಲಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 2 ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆ ತಡರಾತ್ರಿಯವರಗೆ ಕಲಬುರಗಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಿದೆ. ಕಲ್ಬುರ್ಗಿ ನಗರ ಸೇರಿ ಜಿಲ್ಲೆಯ ಹಲವೆಡೆ ಧಾರಾಕರ ಮಳೆಯಾಗಿದ್ದು ರೈತರಲ್ಲಿ ಆತಂಕ ಹೆಚ್ಚಿಸಿದೆ. ಭಾರಿ ಮಳೆಗೆ ಈಗಾಗಲೇ ರೈತರ ನೂರಾರು ಎಕರೆ ಬೆಳೆ ಹಾನಿಯಾಗಿದೆ. ಧಾರಾಕಾರ ಮಳೆಗೆ ಜನ ಜೀವನ ಅಸ್ಥವ್ಯಸ್ಥವಾಗಿದ್ದು ವಾಹನ ಸವಾರರು ಪರದಾಡುವಂತಾಗಿತ್ತು. ಬೆಂಗಳೂರಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಇಡೀ ದಿನ ಮೋಡ ಕವಿದ ವಾತಾವರಣ ಇದ್ದು ಆಗಾಗ ಎನ್ನುವಂತೆ ಮಳೆಯಾಗುತ್ತಿದೆ.
ಇನ್ನು ವಿವಾದಿತ ಕೆಆರ್ಎಸ್ ಜಲಾಶಯ ನಿನ್ನೆ ನೂರು ಅಡಿ ತಲುಪಿತು. ಕಳೆದ ಕೆಲ ದಿನಗಳಿಂದ ಉತ್ತಮಾಗಿ ಮಳೆಯಾದ್ದರಿಂದ ಅಣೆಕಟ್ಟಿನ ನೀರಿನ ಪ್ರಮಾಣ ನೂರು ಅಡಿ ಮುಟ್ಟಿದೆ. ಕೊಡಗು ಹಾಗೂ ಭಾಗಮಂಡಲದಲ್ಲಿ ಉತ್ತವಾಗಿ ಮಳೆಯಾಗಿದ್ದು ಇದಕ್ಕೆ ಕಾರಣವಾಗಿದೆ. ಡ್ಯಾಂನ ನೀರಿನ ಪ್ರಮಾಣ ನೂರು ಅಡಿ ತಲುಪಿದ ಹಿನ್ನೆಲೆ ಮಂಡ್ಯ ರೈತರಲ್ಲಿ ಹರ್ಷ ಮೂಡಿದೆ. ಮಳೆ ಇನ್ನೂ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಸೂಚನೆ ನೀಡಿರುವುದರಿಂದ ನೀರಿಗೆ ಈ ಬಾರಿ ಬರ ಇರುವುದಿಲ್ಲ ಎನ್ನುವ ಸಂತಸ ರೈತರಲ್ಲಿ ಮನೆಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments