ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಶವಯಾತ್ರೆಯ ವೇಳೆ ಕಲ್ಲು ತೂರಾಟ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ಮೂಲಗಳು ತಿಳಿಸಿವೆ.
ಶರತ್ ಮಡಿವಾಳ ಬೆಂಬಲಿಗರು ಬಸ್, ಅಟೋ ಇತರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಅನೇಕ ವಾಹನಗಳು ಜಖಂಗೊಂಡಿವೆ. ಉದ್ರಿಕ್ತರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಲ್ಲದೇ ಹಲವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಬಿ.ಸಿ.ರೋಡ್ ಬಳಿಯಿರುವ ಕೈಕಂಬ ಪ್ರದೇಶದಲ್ಲಿ ಕಲ್ಲು ತೂರಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕಲ್ಲುತೂರಾಟದಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಬಂಟ್ವಾಳ ತಾಲೂಕಿನ ಕೆಂದೂರು ಗ್ರಾಮದಲ್ಲಿರುವ ಶರತ್ ಮಡಿವಾಳ ಅವರ ತೋಟದ ಮನೆಯಲ್ಲಿ ಅಂತ್ಯಸಂಸ್ಕಾರ ನಡೆಸಲಾಗುತ್ತಿದೆ ಎಂದು ಶರತ್ ಕುಟುಂಬದವರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.