ಆಂಧ್ರಪ್ರದೇಶದ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
ಆಂಧ್ರ ಪ್ರದೇಶಕ್ಕೆ ಸೇರಿರೋ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಮಂಗಳೂರು ಹೊರವಲಯದ ಫರಂಗಿಪೇಟೆಯಲ್ಲಿ ನಡೆದಿದೆ.
ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಒಳಗಾದ ಬಸ್ ಆಂಧ್ರ ಪ್ರದೇಶ ಸರ್ಕಾರಿ ಬಸ್ ಆಗಿದೆ. ಈ ಬಸ್ ತಿರುಪತಿಯಿಂದ ಮಂಗಳೂರಿಗೆ ಹೋಗುತ್ತಿತ್ತು.
ಕಿಡಿಗೇಡಿಗಳ ಕೃತ್ಯದಿಂದ ಬಸ್ನ ಸೈಡ್ ವಿಂಡೋನ ಗ್ಲಾಸ್ ಪುಡಿಪುಡಿಯಾಗಿದೆ. ಬಸ್ನಲ್ಲಿ 30 ಮಂದಿ ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.