ಬೆಂಗಳೂರು : ಶಾಸಕ ಪ್ರೀತಂಗೌಡ ಮನೆ ಮೇಲೆ ಕಲ್ಲು ತೂರಾಟ ನಡೆದ ಹಿನ್ನಲೆಯಲ್ಲಿ ಇಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಸಿದ್ದತೆ ನಡೆಸಿದೆ.
ಮಾಜಿ ಪ್ರಧಾನಿ ಹೆಚ್.ಡಿ .ದೇವೇಗೌಡರ ಸಾವಿನ ಬಗ್ಗೆ ಮಾತನಾಡಿದ್ದಾರೆ ಎಂದು ಕೆಲವರು ಬಿಜೆಪಿ ಶಾಸಕ ಪ್ರೀತಂಗೌಡ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆಯಲ್ಲಿ ಓರ್ವ ಬೆಂಬಲಿಗ ಗಂಭೀರವಾಗಿ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಸೇರಿದಂತೆ ಜೆಡಿಎಸ್ ನ 8 ಕಾರ್ಯಕರ್ತರ ವಿರುದ್ಧ ಎಫ್ ಐಆರ್ ಕೂಡ ದಾಖಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಜೆಡಿಎಸ್ ದೌರ್ಜನ್ಯ ನಡೆಸಿದೆ ಎಂದು ಆರೋಪಿಸಿ ಇಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಅಲ್ಲದೇ ಬೆಳಗ್ಗೆ 10.30 ಕ್ಕೆ ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಲು ಸಹ ಬಿ.ಎಸ್.ವೈ ಮುಂದಾಗಿದ್ದಾರೆ.