Publish Date: Wed, 22 Jul 2020 (19:19 IST)
Updated Date: Wed, 22 Jul 2020 (19:21 IST)
ಪಿಪಿಇ ಕಿಟ್ ಹಾಗೂ ಶೌಚಾಲಯ ವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ವಾರಿಯರ್ಸ್ ಪ್ರತಿಭಟನೆ ನಡೆಸಿದ್ದಾರೆ.
ಕೊರೊನಾ ವೈರಸ್ ವಿರುದ್ಧ ಹೋರಾಟದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಶುಶ್ರೂಷಾ ಸಿಬ್ಬಂದಿಗಳು ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿದ್ದಾರೆ.
ಕೋವಿಡ್ ಕಾರ್ಯ ನಿರ್ವಹಿಸುತ್ತಿರುವ ವೇಳೆಯಲ್ಲಿ ಪಿಪಿಇ ಕಿಟ್, ಶೌಚಾಲಯ ವ್ಯವಸ್ಥೆ ಸೇರಿದಂತೆ ಮಾಸ್ಕ್ ಗಳನ್ನ ಸರಿಯಾಗಿ ನೀಡುತ್ತಿಲ್ಲ ಎಂದು ಶುಶ್ರೂಷಾ ಸಿಬ್ಬಂದಿಗಳು ಆಕ್ರೋಶ ವ್ಯಕ್ತಪಡಿಸಿದರು.
ಬೇಡಿಕೆ ಈಡೇರಿಸಲು ಮನವಿಯನ್ನ ಸಿಇಓ ಗೆ ಸಲ್ಲಿಸಲು ಹೋದರೆ ನಮ್ಮ ಮೇಲೆ ದಬ್ಬಾಳಿಕೆ ಮಾಡಿದ್ದಾರೆಂದು ಆರೋಪಿಸಿದರು. ಅಲ್ಲದೇ ಎಲ್ಲರೂ ರಾಜೀನಾಮೆ ನೀಡಿ ಎಂದು ಹೇಳಿದ್ದಾರೆ ಅಂತಾ ಶುಶ್ರೂಷಾ ಸಿಬ್ಬಂದಿಗಳು ಕಿಮ್ಸ್ ಸಿಎಒ ರಾಜೇಶ್ವರಿ ಜೈನಾಪುರ ವಿರುದ್ಧ ಪ್ರತಿಭಟನೆ ನಡೆಸಿದರು.
ಇನ್ನೂ ಸ್ಥಳಕ್ಕೆ ಭೇಟಿ ನೀಡಿದ ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ಅವರು ನರ್ಸ್ ಗಳ ಬೇಡಿಕೆ ಈಡೇರಿಸುವುದಾಗಿ ಆಶ್ವಾಸನೆ ನೀಡಿದರು.