Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ವಾಟ್ಸಪ್‍ನಲ್ಲಿ ಫೋಟೋ ಕಳಿಸುವಂತೆ ವಿದ್ಯಾರ್ಥಿನಿಗೆ ಕಿರುಕುಳ: ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ವಿರುದ್ಧ ಆಕ್ರೋಶ

ವಾಟ್ಸಪ್‍ನಲ್ಲಿ ಫೋಟೋ ಕಳಿಸುವಂತೆ ವಿದ್ಯಾರ್ಥಿನಿಗೆ ಕಿರುಕುಳ: ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ವಿರುದ್ಧ ಆಕ್ರೋಶ
ಹಾಸನ , ಶುಕ್ರವಾರ, 29 ಜೂನ್ 2018 (17:02 IST)
ವ್ಯಾಟ್ಯಪ್ ಗೆ ತನ್ನ ಫೋಟೋ ಕಳಿಸುವಂತೆ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ ಕಾಲೇಜಿನ ಕಾರ್ಯದರ್ಶಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದಲ್ಲದೆ ಶಾಲೆಯ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ಬೇಲೂರು ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ವಿಶ್ವ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಕಾರ್ಯದರ್ಶಿ ಯಶಸ್ವಿ, ಅದೇ ಕಾಲೇಜಿನಲ್ಲಿ ಹತ್ತನೆ ತರಗತಿ ಓದುತ್ತಿರುವ ವಿದ್ಯಾರ್ಥಿನಿಗೆ ಪ್ರತಿ ನಿತ್ಯ ಪೋಟೋ ಕಳಿಸುವಂತೆ ಕಿರುಕುಳ ನೀಡುತ್ತಿದ್ದನು. ಇದರಿಂದ ಬೇಸತ್ತ ವಿದ್ಯಾರ್ಥಿನಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಕಾಲೇಜಿಗೆ ಆಗಮಿಸಿದ ಪೋಷಕರು ಕಾಲೇಜಿನ ಆಡಳಿತ ಮಂಡಳಿಗೆ ದೂರು ನೀಡಿದ್ದರು.

ಈ ವೇಳೆ ಕಾರ್ಯದರ್ಶಿ ಯಶಸ್ವಿ ಎಲ್ಲರ ಎದುರು ತನ್ನ ತಪ್ಪನ್ನು ಒಪ್ಪಿಕೊಂಡು ವಿದ್ಯಾರ್ಥಿನಿ ಬಳಿ ಕ್ಷಮೆಯಾಚಿಸಿದ್ದನು. ಮರು ದಿನ ವಿದ್ಯಾರ್ಥಿನಿ ಶಾಲೆಗೆ ಬರುತ್ತಿದ್ದ ವೇಳೆ ರಸ್ತೆ ಮಧ್ಯೆ ಅಡ್ಡಗಟ್ಟಿ ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಧಮಕಿ ಹಾಕಿದ್ದು, ಹೆದರಿದ ಬಾಲಕಿ ಮತ್ತೆ ತನ್ನ ಪೋಷಕರಿಗೆ ತಿಳಿಸಿದ್ದಾರೆ. 
 
ಕಾಲೇಜಿಗೆ ಆಗಮಿಸಿದ ಪೋಷಕರು ಕಾಲೇಜಿನ ಪ್ರಾಂಶುಪಾಲ ಹಾಗೂ ಆಡಳಿತಮಂಡಳಿಯವರನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ‌ಪರಿಸ್ಥಿತಿ ತಿಳಿಗೊಳಿಸಿದರು. ಕೂಡಲೇ ಯಶಸ್ವಿಯನ್ನು ಬಂಧಿಸಿ ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.

ಯಶಸ್ವಿ ಕಾಲೇಜಿನ ಮಾಲೀಕ ಹಾಗೂ ವೈಡಿಡಿ ಕಾಲೇಜಿನ ಪ್ರಾಂಶುಪಾಲ ಜಯಣ್ಣಗೌಡ ಅವರ ಪುತ್ರನಾಗಿದ್ದಾನೆ. ಜಯಣ್ಣಗೌಡ ಈ ಹಿಂದೆ ಉಪನ್ಯಾಸಕರೊಬ್ಬರ ಪುತ್ರಿಯ ಫೋಟೋ ಮೇಲೆ ಅಶ್ಲೀಲವಾಗಿ ಬರೆದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಪೊಲೀಸರ ಅತಿಥಿಯಾಗಿದ್ದನು.

Share this Story:

Follow Webdunia kannada

ಮುಂದಿನ ಸುದ್ದಿ

ದಲಿತ-ಸವರ್ಣಿಯರ ನಡುವೆ ಗಲಾಟೆ; ಸ್ಥಳದಲ್ಲಿ ಬಿಗುವಿನ ವಾತಾವರಣ