Publish Date: Tue, 29 Jan 2019 (17:58 IST)
Updated Date: Tue, 29 Jan 2019 (18:00 IST)
ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳು ಎನ್ನಲಾದ ತಂಡವೊಂದು ಇಬ್ಬರ ಮೇಲೆ ಸಾಮೂಹಿಕವಾಗಿ ರಾಡುಗಳಿಂದ ಹಲ್ಲೆ ನಡೆಸಿದ ಘಟನೆ ನಡೆಸಿದೆ.
ಜನನಿಬಿಡವಾದ ಕಾಲೇಜು ರಸ್ತೆಯಲ್ಲೆ ಈ ಹಲ್ಲೆ ನಡೆದಿದ್ದು ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದಾರೆ. ಈ ಮಾರಾಮಾರಿಯ ವಿಡಿಯೊ ಕ್ಲಿಪಿಂಗ್ಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಹಾಡಹಗಲೇ ಹಳೇ ದ್ವೇಷದ ಹಿನ್ನೆಲೆ ಬೇರೆ ಕಾಲೇಜಿನ ವಿದ್ಯಾರ್ಥಿಗಳು ಕುಂದಾಪುರ ಪಟ್ಟಣದ ಭಂಡಾರ್ಕಾರ್ಸ್ ಕಾಲೇಜು ನುಗ್ಗಿ, ಅಲ್ಲಿನ ವಿದ್ಯಾರ್ಥಿಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂತಿಮ ಬಿಕಾಂ ವಿದ್ಯಾರ್ಥಿ ಮಿಥುನ್ ಹಾಗೂ ದ್ವಿತೀಯ ಬಿಬಿಎಂ ವಿದ್ಯಾರ್ಥಿ ಅಕ್ಷಯ್ ಮೇಲೆ ಹಲ್ಲೆ ಮಾಡಿದ್ದಾರೆ. ಹೊಡೆದಾಟ ತಪ್ಪಿಸಲು ಮುಂದಾದ ಕೆಲ ವಿದ್ಯಾರ್ಥಿಗಳ ಮೇಲೂ ಹಲ್ಲೆ ನಡೆಸಿ ವಿದ್ಯಾರ್ಥಿಗಳು ಗಾಯಗೊಳಿಸಿದ್ದಾರೆ.
ಸ್ಥಳೀಯರು ಒಟ್ಟಾಗುತ್ತಿದ್ದಂತೆ ಪುಂಡ ವಿದ್ಯಾರ್ಥಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರು ವಿದ್ಯಾರ್ಥಿಗಳು ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈ ಸಂಬಂಧ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Jagadeesh
Publish Date: Tue, 29 Jan 2019 (17:58 IST)
Updated Date: Tue, 29 Jan 2019 (18:00 IST)