Publish Date: Thu, 06 Jul 2023 (12:58 IST)
Updated Date: Thu, 06 Jul 2023 (16:21 IST)
ಶಾಲಾ-ಕಾಲೇಜಿಗೆ ತೆರಳಲು ಬಸ್ ಸಮಸ್ಯೆಯಾಗುತ್ತಿದ್ದ ಹಿನ್ನೆಲೆ, ಹೆದ್ದಾರಿಯಲ್ಲಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಬೀದರ್ನ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದಲ್ಲಿ ನಿನ್ನೆ ಒಂದು ಗಂಟೆ ಕಾಲ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ. ಶಾಲಾ-ಕಾಲೇಜಿಗೆ ತೆರಳುವಾಗ ಬಸ್ ಚಾಲಕರು ಬಸ್ ನಿಲ್ಲಿಸುವುದಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ. ಸುಮಾರು ವರ್ಷಗಳಿಂದ ಬಸ್ ಸಮಸ್ಯೆ ಇದೆ, ಪ್ರತಿ ದಿನ ಯಾವುದೇ ಬಸ್ ಸ್ಟಾಪ್ ಕೊಡ್ತಿಲ್ಲ ಎಂದು ವಿದ್ಯಾರ್ಥಿನಿಯರು ಆಕ್ರೋಶ ಹೊರಹಾಕಿದ್ದಾರೆ. ಪ್ರತಿದಿನ ತಡವಾಗಿ ಕಾಲೇಜಿಗೆ ತೆರಳುತ್ತಿದ್ದೇವೆ, ಪರೀಕ್ಷೆಗೂ ಕೂಡ ತಡವಾಗಿ ಹೋಗುತ್ತಿದ್ದೇವೆ. ಆದ್ದರಿಂದ ಬಸ್ ಸಮಸ್ಯೆ ಬಗೆಹರಿಸಿ ಎಂದು ಅಧಿಕಾರಿಗಳಿಗೆ ವಿದ್ಯಾರ್ಥಿನಿಯರು ಮನವಿ ಮಾಡಿಕೊಂಡಿದ್ದಾರೆ.