ಪೊಳ್ಳು ಗ್ಯಾರಂಟಿಗಳ ಮೂಲಕ ದೀಪಾವಳಿ ಹೊತ್ತಿಗೆ ರಾಜ್ಯವನ್ನು ದಿವಾಳಿ ಅಂಚಿಗೆ ನೂಕಿರುವ ಸರ್ಕಾರ ರೈತರ ಮೇಲೆಯೂ ವಕ್ರದೃಷ್ಟಿ ಬೀರಿದೆ. ಬರ, ವಿದ್ಯುತ್ ಕ್ಷಾಮದಿಂದ ಕಂಗೆಟ್ಟು ಹೋಗಿರುವ ಅನ್ನದಾತರಿಗೆ ಮತ್ತೊಂದು ಬರೆ ಎಳೆದು, ತಾನು ರೈತದ್ರೋಹಿ ಎಂದು ಸಾಬೀತು ಮಾಡಿಕೊಂಡಿದೆ ಎಂದು ಸರ್ಕಾರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.