Publish Date: Sun, 16 Oct 2022 (15:48 IST)
Updated Date: Sun, 16 Oct 2022 (15:50 IST)
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ ಯಶಸ್ವಿಯಾಗಿ ನಡೆಯುತ್ತಿದೆ. ಇಂದಿಗೆ 16 ನೇ ದಿನಕ್ಕೆ ಭಾರತ್ ಜೋಡೋ ಯಾತ್ರೆ ಕಾಲಿಟ್ಟಿದೆ. ಇಂದು ಬಳ್ಳಾರಿ ಜಿಲ್ಲೆಯ ಸಂಗನಕಲ್ಲು ಗ್ರಾಮದ ಬಳಿಯಿಂದ ಪಾದಯಾತ್ರೆ ಆರಂಭವಾಗಿದೆ. ರಾಹುಲ್ ಗಾಂಧಿ ಜೊತೆ ರಾಜ್ಯ ಉಸ್ತುವಾರಿ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಾಥ್ ನೀಡಿದ್ದಾರೆ. ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದಾರೆ. ಇದರ ಜೊತೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನರು ಜೋಡೊ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇಂದಿನ ಭಾರತ್ ಜೋಡೊ ಯಾತ್ರೆ ಆಂಧ್ರದ ಗಡಿ ಭಾಗ ತಲುಪಲಿದೆ.