Publish Date: Sat, 29 Jul 2023 (17:30 IST)
Updated Date: Sat, 29 Jul 2023 (17:13 IST)
ಪ್ರೀತಿ ಫಲಿಸದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನ ಜೆಎಸ್ ನಗರದಲ್ಲಿ ನಡೆದಿದೆ. ನವೀನ ಮೂಲತಃ ಕೊಳ್ಳೆಗಾಲದ ಯುವಕನಾಗಿದ್ದು, ಬೆಂಗಳೂರಿನಲ್ಲಿ ಬಾಳೆಮಂಡಿ ಕೆಲಸ ಮಾಡಿಕೊಂಡಿದ್ದ. ಈ ನಡುವೆ ಪ್ರೀತಿಸ್ತಿದ್ದ ಯುವತಿ ಪ್ರೇಮ ನಿರಾಕರಣೆ ಮಾಡಿದ ಹಿನ್ನೆಲೆ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಿಯತಮೆ ಹೆಸರನ್ನು ಡೆತ್ನೋಟ್ನಲ್ಲಿ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ನ ಘಟನೆ ಹಿನ್ನೆಲೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ರಾಮಯ್ಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ಮಾಡಲು ರವಾನೆ ಮಾಡಲಾಗಿದೆ. ಈ ಸಂಬಂಧ ಮಹಾಲಕ್ಷ್ಮಿಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.