Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಪತಿ, ನಾದಿನಿ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿ 32 ವರ್ಷದ ನಾಗವೇಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.. ಯಳಂದೂರು ನಿವಾಸಿಯಾದ ಈಕೆ ಕಳೆದ ಮೂರು ದಿನಗಳ ಹಿಂದೆ ಕಾಣೆಯಾಗಿದ್ದರು. ಚಾಮರಾಜನಗರದ ಜೆಎಸ್ಎಸ್ ಆಸ್ಪತ್ರೆಯ ಫಿಸಿಯೋ ಥೆರಪಿಸ್ಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ನಾಗವೇಣಿ, ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತಳ ಪತಿ ಸ್ವಾಮಿನಾಯಕ ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಯಲ್ಲಿ ಕ್ಷಯರೋಗ ವಿಭಾಗದ ಸೂಪರ್ ವೈಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು..ಪತಿ ಹಾಗೂ ಈತನ ತಂಗಿ ಭಾಗ್ಯ ದಿನನಿತ್ಯ ಮಾನಸಿಕ ಹಾಗು ದೈಹಿಕ ಕಿರುಕುಳ ನೀಡುತ್ತಿದ್ರು. ಹೀಗಾಗಿ ನಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿ ನಾಗವೇಣಿ ಪೋಷಕರು ಯಳಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.