ಮಂಡ್ಯ : ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಜಿಲ್ಲೆಯ ಸಮಸ್ಯೆಯನ್ನು ಬಗೆಹರಿಸುವಂತೆ ಕೇಳಿಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಅಮಿತ್ ಶಾ ಅವರನ್ನು ಭೇಟಿಯಾಗಿರುವ ಬಗ್ಗೆ ಸುಮಲತಾ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಅಮಿತಾ ಶಾ ಜೊತೆ ಇದ್ದ ತಮ್ಮ ಫೋಟೋ ಕ್ಲಿಕ್ಕಿಸಿಕೊಂಡು ಫೇಸ್ ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಹಾಗೇ “ದೇಶದ ಗೃಹ ಸಚಿವರೊಂದಿಗೆ ಕ್ಷೇತ್ರದ ಹಲವಾರು ಕೆಲಸಗಳಿಗೆ ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದೇನೆ” ಎಂದು ತಿಳಿಸಿದ್ದಾರೆ.
ಸುಮಲತಾ ಅವರು ಮಂಡ್ಯದಲ್ಲಿನ ಹಲವು ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಅನುದಾನ ಕೊಡಿಸುವಂತೆ ಹಾಗೂ ಮಂಡ್ಯ ಜಿಲ್ಲೆಯ ಕಡೆ ಮುಂಗಾರು ಕೈ ಕೊಟ್ಟ ಹಿನ್ನಲೆಯಲ್ಲಿ ರೈತರ ಸಮಸ್ಯೆಗಳಿಗೆ ಪರಿಹರಿಸುವಂತೆ ಗೃಹ ಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ ಎಂದು ಅವರ ಆಪ್ತ ಮೂಲಗಳಿದ ತಿಳಿದು ಬಂದಿದೆ.