Publish Date: Sat, 06 Apr 2019 (10:21 IST)
Updated Date: Sat, 06 Apr 2019 (10:22 IST)
ಮಂಡ್ಯ : ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅವರಿಗೆ ಬೆಂಬಲ ಘೋಷಿಸಿದ್ದ ಬಿಜೆಪಿಗೆ ಇದೀಗ ಬಾರೀ ಮುಖ ಭಂಗವಾಗಿದೆ.
ಹೌದು. ಕಾಂಗ್ರೆಸ್ ನಿಂದ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಸುಮಲತಾ ಅಂಬರೀಶ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೀಳಿದಿದ್ದಾರೆ. ಆ ವೇಳೆ ಬಿಜೆಪಿ ಅವರು ಮಂಡ್ಯ ಕ್ಷೇತ್ರದಲ್ಲಿ ಪ್ರತಿಸ್ಪರ್ಧಿಯನ್ನು ಹಾಕದೇ ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ಸೂಚಿಸಿದ್ದರು.
ಆದರೆ ಶುಕ್ರವಾರ ಮಂಡ್ಯ ಲೋಕಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ಮುಸ್ಲಿಂ ಮುಖಂಡರ ಮನೆಗಳಿಗೆ ಭೇಟಿ ನೀಡಿ ಪ್ರಚಾರ ನಡೆಸಿ ನಂತರ ನಡೆದ ಸಭೆಯಲ್ಲಿ ಮಾತನಾಡಿದ ಸುಮಲತಾ ಅವರು, ನನ್ನ ಮೊದಲ ಆಧ್ಯತೆ ಕಾಂಗ್ರೆಸ್ ಆಗಿತ್ತು. ಅಲ್ಲಿ ಟಿಕೆಟ್ ಸಿಗದ ಕಾರಣ ಪಕ್ಷೇತರವಾಗಿ ಸ್ಪರ್ಧಿಸಿರುವೆ, ಇದಲ್ಲದೇ ಚುನಾವಣೆ ಬಳಿಕ ನಾನು ಬಿಜೆಪಿ ಸೇರುವುದಿಲ್ಲ ಎಂದು ಹೇಳುವುದರ ಮೂಲಕ ಬಿಜೆಪಿಗೆ ಬಿಗ್ ಶಾಕ್ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ