Publish Date: Sat, 04 Mar 2023 (13:41 IST)
Updated Date: Sat, 04 Mar 2023 (13:43 IST)
ಮಂಡ್ಯ : ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೊಳ್ಳುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಲೇ ಇದೆ. ಆದರೆ ಅಧಿಕೃತವಾಗಿ ಅವರು ಇನ್ನೂ ಬಿಜೆಪಿ ಸೇರ್ಪಡೆಗೊಂಡಿಲ್ಲ.
ಇದೀಗ ಸುಮಲತಾ ಬಿಜೆಪಿ ಸೇರ್ಪಡೆಗೂ ಮುನ್ನವೇ ಬಿಜೆಪಿ ಪಕ್ಷ ಸಂಘಟನೆ ಕಾರ್ಯಕ್ರಮದಲ್ಲಿ ಬಹಿರಂಗವಾಗಿಯೇ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್ 12 ರಂದು ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಈ ಹಿನ್ನೆಲೆ ಗೆಜ್ಜಲೆಗೆರೆ ಬಳಿ ನಡೆಯಲಿರುವ ವೇದಿಕೆ ಕಾರ್ಯಕ್ರಮದ ಸ್ಥಳವನ್ನು ಪರಿಶೀಲನೆ ನಡೆಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗಮಿಸಿದ್ದಾರೆ. ಈ ವೇಳೆ ಅಧಿಕಾರಿಗಳೊಂದಿಗೆ ಅವರು ಚರ್ಚೆ ನಡೆಸಿದ್ದಾರೆ. ಬಳಿಕ ಬಿಜೆಪಿ ಸಚಿವರು, ಸಂಸದರು, ಬಿಜೆಪಿ ಮುಖಂಡರ ಜೊತೆ ಸಭೆ ನಡೆಸಿದ್ದಾರೆ.