Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
JDS ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡುವುದಾಗಿ ಸಕಲೇಶಪುರ ಶಾಸಕ .ಕುಮಾರಸ್ವಾಮಿ ಹೇಳಿದರು.. JDS ರಾಜ್ಯ ಘಟಕದ ನೂತನ ರಾಜ್ಯಾಧ್ಯಕ್ಷರಾಗಿ ಸಿ.ಎಂ .ಇಬ್ರಾಹಿಂ ಅಧಿಕಾರ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ಸಿಂದ ಜೆಡಿಎಸ್ಗೆ ಸೇರುವುದಾಗಿ ಇಬ್ರಾಹಿಂ ಇತ್ತೀಚೆಗಷ್ಟೇ ಘೋಷಿಸಿದ್ದರು. ರಾಜೀನಾಮೆ ಕುರಿತು ಈಗಾಗಲೇ ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದ ಸಂಘಟನೆ ದೃಷ್ಟಿಯಿಂದ ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಲಾಗುತ್ತಿದೆ ಎಂದು ಎಚ್.ಕೆ.ಕುಮಾರಸ್ವಾಮಿ ಹೇಳಿದರು.