ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ವಾದವನ್ನು ಮೊದಲ ಬಾರಿಗೆ ಒಪ್ಪಿಕೊಂಡಿರುವ ಸುಪ್ರೀಕೋರ್ಟ್, ಅಕ್ಟೋಬರ್ 7 ರಿಂದ 18 ರವರೆಗೆ ಕಾವೇರಿ ನದಿಯಿಂದ ತಮಿಳುನಾಡಿಗೆ ಪ್ರತಿ ದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.
ಅಕ್ಟೋಬರ್ 7 ರಿಂದ ಕರ್ನಾಟಕ ಹಾಗೂ ತಮಿಳುನಾಡಿಗೆ ತಜ್ಞರ ತಂಡ ಭೇಟಿ ನೀಡಿ. ಎರಡೂ ರಾಜ್ಯಗಳ ವಾಸ್ತವ ಪರಿಸ್ಥಿತಿ ಕುರಿತು ಅಧ್ಯಯನ ಮಾಡಿ ಅಕ್ಟೋಬರ್ 18 ರಂದು ನಡೆಯುವ ವಿಚಾರಣೆಯಲ್ಲಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಸೂಚನೆ ನೀಡಿದೆ.
ಕರ್ನಾಟಕದ ವಾದವನ್ನು ಮೊದಲ ಬಾರಿಗೆ ಒಪ್ಪಿಕೊಂಡಿರುವ ಸುಪ್ರೀಕೋರ್ಟ್ ಅಕ್ಟೋಬರ್ 7 ರಿಂದ 18 ರವರೆಗೆ ಕಾವೇರಿ ನದಿಯಿಂದ ಪ್ರತಿ ದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಉದಯ್ ಲಲಿತ್ ನೇತೃತ್ವದ ದ್ವಿಸದಸ್ಯ ಪೀಠ ಆದೇಶ ಹೊರಡಿಸಿದೆ.
ಕಾವೇರಿ ವಿಚಾರದಲ್ಲಿ ನಿರಂತರವಾಗಿ ಮುಖಭಂಗ ಅನುಭವಿಸುತ್ತಿದ್ದ ರಾಜ್ಯ ಸರಕಾರ, ಇಂದಿನ ಆದೇಶದಿಂದ ಸ್ವಲ್ಪ ನಿರಾಳವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ನ್ಯಾಯಾಂಗ ನಿಂದನೆಯ ಬೀತಿಯಿಂದ ಪಾರಾಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ