ತಮಿಳುನಾಡಿಗೆ ನೀರು ಹರಿಸುವುದನ್ನು ಮುಂದುವರಿಸಿ ಎಂದು ಸುಪ್ರೀಂಕೋರ್ಟ್ ನೀಡಿರುವ ಆದೇಶಕ್ಕೆ ಕನ್ನಡ ಪರ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಆರಂಭಿಸಿದ್ದಾರೆ.
ತಮಿಳುನಾಡಿಗೆ ಪ್ರತಿನಿತ್ಯ ಎರಡು ಸಾವಿರ ಕ್ಯೂಸೆಕ್ಸ್ ನೀರು ಹರಿಸಿ ಆದೇಶ ಮುಂದುವರಿಸುವಂತೆ ಸುಪ್ರೀಂಕೋರ್ಟ್ ರಾಜ್ಯ ಸರಕಾರಕ್ಕೆ ಸೂಚನೆ ನೀಡಿರುವುದು ಕಾವೇರಿ ಕಣಿವೆಯ ರೈತರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಕಾವೇರಿ ಕೊಳ್ಳದಲ್ಲಿ ಕುಡಿಯುವ ನೀರಿಗೆ ಕೊರತೆಯಿರುವಾಗ, ತಮಿಳುನಾಡಿಗೆ ಪ್ರತಿನಿತ್ಯ ಎರಡು ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಹೇಗೆ ಸಾಧ್ಯ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಹರಿಸುವುದು ಬೇಡ. ಒಂದು ವೇಳೆ, ಸರಕಾರ ಸುಪ್ರೀಂಕೋರ್ಟ್ ಆದೇಶಕ್ಕೆ ಮಣಿದು ನೀರು ಬಿಟ್ಟಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಕನ್ನಡ ಪರ ಸಂಘಟನೆಗಳು ಎಚ್ಚರಿಕೆ ನೀಡಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.